×
Ad

ಜಾಟ್ ನಾಯಕ ಭೂಪೇಂದ್ರ ಸಿಂಗ್ ಚೌಧರಿ ಅವರನ್ನು ಉತ್ತರ ಪ್ರದೇಶ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಬಿಜೆಪಿ

Update: 2022-08-25 15:16 IST
Photo:twitter

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ವಿವಿಧ ರಾಜ್ಯಗಳಲ್ಲಿ ಹಲವು ಉನ್ನತ ಮಟ್ಟದ ನೇಮಕಾತಿಗಳನ್ನು ಪ್ರಕಟಿಸಿದೆ. ಉತ್ತರ ಪ್ರದೇಶ ಸರಕಾರದಲ್ಲಿ ಸಚಿವ ಹಾಗೂ  ವಿಧಾನ ಪರಿಷತ್ತಿನ ಸದಸ್ಯರಾಗಿರುವ ಭೂಪೇಂದ್ರ ಸಿಂಗ್ ಚೌಧರಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಚೌಧರಿ ಅವರು ಪಶ್ಚಿಮ ಉತ್ತರ ಪ್ರದೇಶದ ಜಾಟ್ ಸಮುದಾಯದವರಾಗಿದ್ದು, 2024 ರ ಲೋಕ ಸಭಾ ಚುನಾವಣೆಗಾಗಿ ಜಾಟ್ ಮತಗಳನ್ನು ಕ್ರೋಢೀಕರಿಸಲು ಈ  ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.

ದಕ್ಷಿಣ ಉತ್ತರ ಪ್ರದೇಶದ  ಒಬಿಸಿ ನಾಯಕ ಸ್ವತಂತ್ರ ದೇವ್ ಸಿಂಗ್ ಬದಲಿಗೆ ಭೂಪೇಂದ್ರ ಸಿಂಗ್ ಚೌಧರಿ ಅವರನ್ನು ನೇಮಿಸಲಾಗಿದೆ.

ತ್ರಿಪುರಾ ಬಿಜೆಪಿ ಅಧ್ಯಕ್ಷರಾಗಿ ರಾಜೀವ್ ಭಟ್ಟಾಚಾರ್ಯ ಅವರನ್ನು ನೇಮಕ ಮಾಡಲಾಗಿದ್ದು, ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸೌದನ್ ಸಿಂಗ್ ಅವರನ್ನು ಹಿಮಾಚಲ ಪ್ರದೇಶದ ಚುನಾವಣಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ.

ದೇವೇಂದ್ರ ಸಿಂಗ್ ರಾಣಾ ಅವರನ್ನು ಹಿಮಾಚಲ ಪ್ರದೇಶದ ಜಂಟಿ ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News