×
Ad

ಬಂಟ್ವಾಳ: ಪ್ರಧಾನಿ ಮಂಗಳೂರು ಭೇಟಿ ಹಿನ್ನೆಲೆ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Update: 2022-08-25 18:41 IST

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಅವರು ಸ.2ರಂದು ಮಂಗಳೂರಿಗೆ ಆಗಮಿಸಿ ಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಜರಗಲಿರುವ ಬೃಹತ್ ಸಮಾವೇಶದಲ್ಲಿ ಭಾಗವಹಿಸುವ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಬಿ.ಸಿ.ರೋಡು ಸ್ಪರ್ಶ ಕಲಾ ಮಂದಿರದಲ್ಲಿ ಗುರುವಾರ ಪೂರ್ವಭಾವಿ ಸಭೆ ಜರಗಿತು. 

ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಜಿಲ್ಲೆಗೆ ಆಗಮಿಸುವ ಪ್ರಧಾನಿ ಅವರ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಸೇರಲಿರುವುದರಿಂದ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ದೃಷ್ಟಿಯಿಂದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪ್ರತಿ ಬೂತ್ ಗಳಿಂದ ಕನಿಷ್ಟ 100 ಕಾರ್ಯಕರ್ತರನ್ನು ಹಾಗೂ ಪಕ್ಷದ ಅಭಿಮಾನಿಗಳನ್ನು ಕರೆದುಕೊಂಡು ಬರುವ ಜವಾಬ್ದಾರಿಯನ್ನು ಪಕ್ಷದ ಪ್ರಮುಖರು ಮಾಡಬೇಕು. ಬಂಟ್ವಾಳದಿಂದ ಸುಮಾರು 25,000 ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು. 

ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ, ಸುಲೋಚನ ಭಟ್ ಮತ್ತು ಕ್ಷೇತ್ರ ಪದಾಧಿಕಾರಿಗಳು ಪಕ್ಷದ ಜಿಲ್ಲಾ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ವಿವಿಧ ಪ್ರಕೋಷ್ಟ ಪ್ರಮುಖರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News