ಗೌರಿ ಗಣೇಶ ಹಬ್ಬ ಹಿನ್ನೆಲೆ; ಕೆಎಸ್ಸಾರ್ಟಿಸಿಯಿಂದ 500 ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ, ಶೇ.10ರಷ್ಟು ರಿಯಾಯಿತಿ

Update: 2022-08-25 14:57 GMT

ಬೆಂಗಳೂರು, ಆ. 25: ಗೌರಿ ಗಣೇಶನ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿಯಿಂದ (Karnataka State Road Transport Corporation) ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಆ.29 ಮತ್ತು 30ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಆ.31ರಂದು ರಾಜ್ಯದ ವಿವಿಧೆಡೆಗಳಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಕೆಂಪೇಗೌಡ ಬಸ್‍ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್.

ಮೈಸೂರು ರಸ್ತೆ ಬಸ್‍ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ. ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಶೇ.10ರಷ್ಟು ರಿಯಾಯಿತಿ: ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು. ಕೋವಿಡ್ ಸೋಂಕು ತಡೆ ಮಾರ್ಗಸೂಚಿಯನ್ನು ಸಾರ್ವಜನಿಕ ಪ್ರಯಾಣಿಕರು ಪಾಲನೆ ಮಾಡಬೇಕು ಎಂದು ಸಂಸ್ಥೆ ಪ್ರಕಟಣೆಯಲ್ಲಿ ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News