×
Ad

ಪೊಲೀಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿ

Update: 2022-08-25 21:56 IST

ಬೆಂಗಳೂರು, ಆ.25: ಐಪಿಎಸ್ ಅಧಿಕಾರಿಗಳಾಗಿ ಭಡ್ತಿ ಪಡೆದಿರುವ ರಾಜ್ಯದ 7 ಪೊಲೀಸ್ ಅಧಿಕಾರಿಗಳಿಗೆ ತಕ್ಷಣದಿಂದಲೆ ಜಾರಿಗೆ ಬರುವಂತೆ ಅವರು ಕರ್ತವ್ಯ ನಿರ್ವಹಿಸುತ್ತಿರುವ ಜಾಗದಲ್ಲೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ.

ಕೋಲಾರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ-ಸಚಿನ್ ಘೋರ್ಪಡೆ, ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ-ಅಮಾತೆ ವಿಕ್ರಮ್, ಮೈಸೂರಿನ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ವರಿಷ್ಠಾಧಿಕಾರಿ-ಸಜೀತ್ ವಿ.ಜೆ. ಅವರನ್ನು ನಿಯುಕ್ತಿಗೊಳಿಸಲಾಗಿದೆ.

ವಿಜಯಪುರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ-ರಾಮಲಕ್ಷ್ಮಣ ಅರಸಿದ್ದಿ, ಬೆಳಗಾವಿ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ವರಿಷ್ಠಾಧಿಕಾರಿ-ಬಾಬಾಸಾಬ್ ನೇಮಗೌಡ್, ಹುಬ್ಬಳ್ಳಿ-ಧಾರವಾಡ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ-ಗೋಪಾಲ್ ಎಂ.ಬ್ಯಾಕೋಡ್ ಹಾಗೂ ಬೆಳಗಾವಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ ನಂದಗಾನ್ವಿ ಅವರನ್ನು ನಿಯುಕ್ತಿಗೊಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News