×
Ad

ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೇತ್ರ ತಪಾಸಣೆ

Update: 2022-08-26 19:00 IST

ಶಿರ್ವ : ರಾಷ್ಟ್ರೀಯ ನೇತ್ರಜ್ಯೋತಿ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಇಲ್ಲಿ ಕೆಎಂಸಿ ಮಣಿಪಾಲ ಹಾಗೂ ಉಡುಪಿ ಜಿಲ್ಲಾಸ್ಪತ್ರೆಯ  ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಮತ್ತು ಉಚಿತ ಪೊರೆ ಶಸ್ತ್ರ ಚಿಕಿತ್ಸೆಯ ಶಿಬಿರವನ್ನು ಏರ್ಪಡಿಸಲಾಗಿತ್ತು.

ಶಿಬಿರದಲ್ಲಿ ಒಟ್ಟು 55 ಮಂದಿಗೆ ಕಣ್ಣಿನ ತಪಾಸಣೆಯನ್ನು ಮಾಡಲಾಗಿದ್ದು, ಇವರಲ್ಲಿ ೧೯ ಮಂದಿ ಫಲಾನುಭವಿಗಳನ್ನು ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಗಿದೆ.

ಆಯ್ಕೆಯಾದವರಿಗೆ ಕಣ್ಣಿನ ಪೊರೆ ಚಿಕಿತ್ಸೆಯನ್ನು ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಥತ್ರೆಯಲ್ಲಿ ಸೆ.8ರಂದು ನಡೆಸಲಾಗುತ್ತದೆ. ಶಿಬಿರದಲ್ಲಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಸುಬ್ರಮಣ್ಯ ರಾವ್, ಡಾ.ಗಾಯತ್ರಿ ಕೆ. ಹಾಗೂ ಕೆಎಂಸಿಯ ತಜ್ಞ ವೈದ್ಯರಾದ ಡಾ.ರಕ್ಷಿತಾ ಮತ್ತು ಡಾ.ನಿಹಾಲ್ ರೆಡ್ಡಿ  ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News