ಪಿಯು ಉಪನ್ಯಾಸಕರ ಹುದ್ದೆ ನೇಮಕಾತಿ: ಆ.22ರಂದು ಪ್ರಕಟಿಸಿದ್ದ ಪಟ್ಟಿ ಹಿಂಪಡೆದ ಶಿಕ್ಷಣ ಇಲಾಖೆ

Update: 2022-08-26 16:07 GMT

ಬೆಂಗಳೂರು, ಆ.26: ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ, ಹೆಚ್ಚುವರಿ ಪಟ್ಟಿಯಲ್ಲಿನ ಅಭ್ಯರ್ಥಿಗಳ ಆಯ್ಕೆ ಪಟ್ಟಿಯಲ್ಲಿ ನ್ಯೂನತೆಗಳು ಇವೆ ಎಂದು ಶಿಕ್ಷಣ ಸಚಿವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ, ಇದನ್ನು ಪರಿಶೀಲಿಸುವಂತೆ ಶಿಕ್ಷಣ ಸಚಿವರು ನಿರ್ದೇಶಿಸಿದ್ದಾರೆ.

ಹಾಗಾಗಿ ಆ.22ರಂದು ಕೆಇಎ ಪ್ರಕಟಿಸಿರುವ ಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಹಿಂಪಡೆದಿದ್ದಾರೆ. ಕರಡು ಪರಿಷ್ಕೃತ ಪಟ್ಟಿಯನ್ನು ಶೀಘ್ರದಲ್ಲಿ ಪ್ರಕಟಿಸಿ, ಆಕ್ಷೇಪಗಳನ್ನು ಆಹ್ವಾನಿಸಿ, ನಂತರ ಅಂತಿಮಗೊಳಿಸಲಾಗುವುದು ಎಂದು ಪ್ರಕಟನೆ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News