×
Ad

ಹೈಕೋರ್ಟ್ ಆದೇಶ ಬೆನ್ನಲ್ಲೇ ಮತ್ತೆ ಶುರುವಾದ ಲೋಕಾಯುಕ್ತ ಕಾರ್ಯಾಚರಣೆ

Update: 2022-08-26 21:42 IST

ಬೆಂಗಳೂರು, ಆ.26: ಹೈಕೋರ್ಟ್ ಆದೇಶದ ಬೆನ್ನಲ್ಲೇ ಲೋಕಾಯುಕ್ತ ಅಧಿಕೃತವಾಗಿ ಕಾರ್ಯಾರಂಭವಾಗಿದ್ದು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲು ಕರ್ನಾಟಕ ಲೋಕಾಯುಕ್ತ ಎಡಿಜಿಪಿ ಆದೇಶ ಹೊರಡಿಸಿದ್ದಾರೆ.

ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಅವರು ಎಸ್‍ಪಿ, ಡಿವೈಎಸ್‍ಪಿ, ಇನ್‍ಸ್ಪೆಕ್ಟರ್‍ಗಳಿಗೆ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಳ್ಳಲು ಆದೇಶ ಹೊರಡಿಸಿದ್ಧಾರೆ. 

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರು ದಾಖಲಿಸಬೇಕು. ಸಾರ್ವಜನಿಕರಿಂದ ಬಂದ ದೂರನ್ನು ಕಾನೂನಿನಡಿ ತನಿಖೆ ನಡೆಸಬೇಕು ಎಂದು ತಿಳಿಸಿದ್ದಾರೆ. ಉಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆ ಎಡಿಜಿಪಿ ಈ ಆದೇಶ ಹೊರಡಿಸಿದ್ದಾರೆ. 

1986ರಲ್ಲಿ ಅಸ್ತಿತ್ವಕ್ಕೆ ಬಂದ ಲೋಕಾಯುಕ್ತ ಸಂಸ್ಥೆಯು ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧದ ಹೋರಾಟದಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News