ಪ್ರಧಾನಿ ಮೋದಿ, ಜೆ.ಪಿ‌ ನಡ್ಡಾ ಭೇಟಿಯಾದ ಮಾಜಿ ಸಿಎಂ ಬಿಎಸ್ ವೈ

Update: 2022-08-26 17:34 GMT

ನವದೆಹಲಿ:  ಮಾಜಿ‌ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು (ಶುಕ್ರವಾರ) ನವದೆಹಲಿಯಲ್ಲಿ ಪ್ರಧಾನಮಂತ್ರಿ  ನರೇಂದ್ರ ಮೋದಿ ಹಾಗೂ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌ ನಡ್ಡಾ ಅವರನ್ನು ಭೇಟಿ ಮಾಡಿ ಮಾತು ಕತೆ ನಡೆಸಿದರು. 

ಪಕ್ಷದ ಸಂಸದೀಯ ಮಂಡಳಿಯಲ್ಲಿ ಸದಸ್ಯರಾಗಿ ಆಯ್ಕೆಗೊಂಡ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ತೆರಳಿರುವ ಬಿಎಸ್ ವೈ ,ಸಂಸದೀಯ ಮಂಡಳಿಯಲ್ಲಿ ಹಾಗೂ ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿ, ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. 

ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರೊಂದಿಗೂ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು,  ಇಂದು ನವದೆಹಲಿಯಲ್ಲಿ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ
ರವರನ್ನು ಭೇಟಿ ಮಾಡಿ ಪಕ್ಷದ ಸಂಸದೀಯ ಮಂಡಳಿಯಲ್ಲಿ ಹಾಗೂ ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿ, ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News