ತುಮಕೂರು ವಿವಿಯಲ್ಲಿ ಸಾವರ್ಕರ್ ಅಧ್ಯಯನ ಪೀಠ

Update: 2022-08-27 05:41 GMT

ತುಮಕೂರು: ರಾಜ್ಯದಲ್ಲಿ ಸಾವರ್ಕರ್ ಫ್ಲೆಕ್ಸ್ ವಿವಾದದ ಬೆನ್ನಲ್ಲೇ, ವಿಶ್ವವಿದ್ಯಾಲಯದಲ್ಲಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಸಿಂಡಿಕೇಟ್ ಸಭೆ ಒಪ್ಪಿಗೆ ನೀಡಿದ್ದು, ರಾಜ್ಯದಲ್ಲಿಯೇ ಮೊದಲ ಅಧ್ಯಯನ ಪೀಠ ಇದಾಗಲಿದೆ ಎನ್ನಲಾಗಿದೆ.

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಮಾಡಲು ವಿ.ವಿ ಸಿಂಡಿಕೇಟ್ ಸಭೆಯಲ್ಲಿ ಶುಕ್ರವಾರ ಒಪ್ಪಿಗೆ ನೀಡಲಾಗಿದೆ.

ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಸಂಬಂಧ ಸಿಂಡಿಕೇಟ್ ಸದಸ್ಯ ಟಿ.ಡಿ.ವಿನಯ್ ಸಲ್ಲಿಸಿದ್ದ ಪ್ರಸ್ತಾಪಕ್ಕೆ ಸಭೆ ಒಮ್ಮತದಿಂದ ಒಪ್ಪಿಗೆ ನೀಡಲಾಯಿತು. ವಿನಯ್ ಅವರು ಈಗಾಗಲೇ ಈ ಪೀಠ ಸ್ಥಾಪನೆಗೆ ₹ 1 ಲಕ್ಷ ರೂ.  ದೇಣಿಗೆ ನೀಡಿದ್ದಾರೆ. ಮತ್ತೊಬ್ಬ ಸದಸ್ಯ ಎಚ್. ಪ್ರಸನ್ನಕುಮಾರ್ ವೈಯಕ್ತಿಕವಾಗಿ ₹25 ಸಾವಿರ ದೇಣಿಗೆ ನೀಡುವುದಾಗಿ ಸಭೆಯಲ್ಲಿ ತಿಳಿಸಿರುವುದಾಗಿ ಮೂಲಗಳು ಹೇಳಿವೆ.

ಇದನ್ನೂ ಓದಿ:  ವಿಜಯಪುರ | ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಭಾವಚಿತ್ರ ಅಂಟಿಸಿದ್ದು ನಾನೇ: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ

ಈಗಾಗಲೇ, ವಿವಿಯಲ್ಲಿ ವಿವಿಧ 14 ಪೀಠ ಸ್ಥಾಪಿಸಲಾಗಿದ್ದು, ಈಗ ಸಾವರ್ಕರ್ ಅಧ್ಯಯನ ಪೀಠ ಸ್ಥಾನ ಪಡೆದಿದೆ. ತಿಗಳ ಜನಾಂಗದ ಅಧ್ಯಯನ ಪೀಠವನ್ನು ವಿ.ವಿಯಲ್ಲೇ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಗಳರ ಸಮಾವೇಶದಲ್ಲಿ ಪ್ರಕಟಿಸಿದ್ದಾರೆ. ಇದು ಸ್ಥಾಪನೆಯಾದರೆ ಪೀಠಗಳ ಸಂಖ್ಯೆ ಮತ್ತಷ್ಟು ಹೆಚ್ಚಲಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News