ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಯು.ಯು. ಲಲಿತ್ ಪ್ರಮಾಣ ವಚನ ಸ್ವೀಕಾರ
Update: 2022-08-27 11:19 IST
ಹೊಸದಿಲ್ಲಿ: ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ (Justice Uday Umesh Lalit )ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಲಲಿತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಲಲಿತ್ ಅವರು ನವೆಂಬರ್ 8 ರಂದು ನಿವೃತ್ತರಾಗಿರುವುದರಿಂದ ಅವರು 74 ದಿನಗಳ ಅಧಿಕಾರವನ್ನು ಹೊಂದಿರುತ್ತಾರೆ.
ಸಿಜೆಐ ಆಗಿ ತಮ್ಮ 74 ದಿನಗಳ ಅಧಿಕಾರಾವಧಿಯಲ್ಲಿ, ಹೊಸ ಪ್ರಕರಣಗಳ ಪಟ್ಟಿ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಸರಳ, ಪರಿಣಾಮಕಾರಿ, ತ್ವರಿತ ಮತ್ತು ಪಾರದರ್ಶಕವಾಗಿಸಲು ಶ್ರಮಿಸುವುದಾಗಿ ಅವರು ಹೇಳಿದರು.
ಎನ್.ವಿ. ರಮಣ ಅವರು ಶುಕ್ರವಾರ ಸಿಜೆಐ ಹುದ್ದೆಯಿಂದ ನಿವೃತ್ತರಾಗಿದ್ದರು. ತನ್ನ ಉತ್ತರಾಧಿಕಾರಿಯನ್ನಾಗಿ ಲಲಿತ್ ಅವರ ಹೆಸರನ್ನುಸರಕಾರಕ್ಕೆ ಶಿಫಾರಸು ಮಾಡಿದ್ದರು.