ಆರೆಸ್ಸೆಸ್, ಬಿಜೆಪಿಗೆ ಹೆದರಿ ಗುಲಾಂ ನಬಿ ಆಝಾದ್ ರಾಜೀನಾಮೆ: ಮಲ್ಲಿಕಾರ್ಜುನ ಖರ್ಗೆ

Update: 2022-08-27 11:12 GMT

ಬೆಂಗಳೂರು, ಆ. 27: ‘ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಝಾದ್ ಅವರು ಬಿಜೆಪಿ, ಆರೆಸೆಸ್ಸ್‍ಗೆ ಹೆದರಿ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಸರಿಯಲ್ಲ' ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ:  ಕಮಿಷನ್ ದಂಧೆಯನ್ನೂ ಕೂಡಾ ಇವರು ದೇಶಭಕ್ತಿ ಎಂದು ವಾದಿಸಿದರೆ ಅಚ್ಚರಿ ಏನಿಲ್ಲ: BJP ವಿರುದ್ಧ ಎಚ್.ಸಿ ಮಹದೇವಪ್ಪ ಕಿಡಿ

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ಮುಖಂಡ ಗುಲಾಂ ನಬಿ ಆಝಾದ್ ಅವರು ಸುಮಾರು 46 ವರ್ಷದಿಂದ ಕೆಲಸ ಮಾಡಿದ್ದಾರೆ. ಅವರು ಪಕ್ಷದಲ್ಲಿ ಎಲ್ಲ ರೀತಿಯ ಅಧಿಕಾರಗಳನ್ನು ಪಡೆದಿದ್ದು, ಆರು ಬಾರಿ ರಾಜ್ಯಸಭೆಯ ಸದಸ್ಯರಾಗಿದ್ದರು. 20ರಿಂದ 25 ವರ್ಷಗಳ ಸುದೀರ್ಘ ಕಾಲ ಸಚಿವರಾಗಿದ್ದರು. ಪಕ್ಷದ ಮಟ್ಟದಲ್ಲೂ ಅತ್ಯುತ್ತಮ ಸ್ಥಾನ ಪಡೆದಿದ್ದರು' ಎಂದು ವಿವರಿಸಿದರು.

ಪ್ರಸ್ತುತ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಸ್ಥಿತಿ ಇಲ್ಲ. ಹಲವು ವರ್ಷಗಳ ಕಾಲ ಅಧಿಕಾರ ಅನುಭವಿಸಿ ಈಗ ಹೊರ ಹೋಗಿರುವುದು ಅದರಲ್ಲೂ ಆಪಾದನೆ ಮಾಡುತ್ತಿರುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ. ಪಕ್ಷ ಸಂಕಷ್ಟದಲ್ಲಿರುವ ಸಮಯದಲ್ಲಿ ಅವರು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಉದ್ದೇಶಕ್ಕಾಗಿ ರಾಜೀನಾಮೆ ನೀಡಿದ್ದು ಮತ್ತು ಅಧಿಕಾರಿ ಅನುಭವಿಸಿ ಇದೀಗ ಆರೋಪ ಮಾಡುತ್ತಿರುವುದು ಸೂಕ್ತವಲ್ಲ' ಎಂದು ಖರ್ಗೆ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News