×
Ad

ಬೆಂಗಳೂರು: ಧಾರಾಕಾರ ಮಳೆಗೆ ಸಂಚಾರ ಅಸ್ತವ್ಯಸ್ತ

Update: 2022-08-27 16:51 IST

ಬೆಂಗಳೂರು, ಆ.27: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮೈಸೂರು ರಸ್ತೆ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಡುವಂತಾಗಿದ್ದು, ಪ್ರಮುಖವಾಗಿ ಕೆಂಗೇರಿ-ವಂಡರ್ಲಾ ನಡುವಿನ ಸಂಚಾರ ಅಸ್ತವ್ಯಸ್ತವಾಗಿತ್ತು.

ನಿನ್ನೆ ಸುರಿದ ಭಾರೀ ಮಳೆಗೆ ಕಣ್ಮಿಣಿಕೆ ಕೆರೆ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ಸವಾರರು ಗಂಟೆಗಟ್ಟೆಲೆ ಕಾಯುತ್ತಿದ್ದ ದೃಶ್ಯ ಕಂಡುಬಂತು.

ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಅದರಲ್ಲೂ ಲಾಲ್‍ಬಾಗ್, ಸೌಂತ್ ಎಂಡ್ ಸರ್ಕಲ್, ಜೆಸಿ ರಸ್ತೆ, ಜಯನಗರ, ಶಾಂತಿನಗರ ಸುತ್ತಮುತ್ತ ಮಳೆಪ್ರಮಾಣ ಅಧಿಕವಾಗಿದೆ.

ಒಂದು ಗಂಟೆ ಸುರಿದ ಮಳೆಯಿಂದ ಕೆಲವು ಕಡೆ ರಸ್ತೆಗಳ ಮೇಲೆ ಮೂರರಿಂದ ನಾಲ್ಕು ಅಡಿಗಳಷ್ಟು ನೀರು ಶೇಖರಣೆಗೊಂಡಿದೆ. ಬಿಟಿಎಂ ಲೇಔಟ್, ಬಿಳೇಕಹಳ್ಳಿಯ ಅನುಗ್ರಹ ಬಡಾವಣೆಯ ಎರಡು ರಸ್ತೆಗಳಲ್ಲಿ ನೀರು ತುಂಬಿದೆ. ಚರಂಡಿಯಲ್ಲಿ ಬ್ಲಾಕ್ ಆಗಿ ರಸ್ತೆ ಮೇಲೆ ನೀರು ನಿಂತಿದೆ. ಅದೃಷ್ಟವಶಾತ್ ಮನೆಗಳಿಗೆ ನೀರು ನುಗ್ಗಿಲ್ಲ.

ರಸ್ತೆಯಲ್ಲಿ ನೀರು ನಿಂತ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಪಂಪ್ ಮೂಲಕ ನೀರನ್ನು ತೆರವು ಮಾಡುವ ಕೆಲಸ ಮಾಡಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News