ಈದ್ಗಾ ಮೈದಾನ ವಿವಾದ: ಮುಸ್ಲಿಮ್ ಸಂಘಟನೆ ಸುಪ್ರೀಂಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದ ಸಚಿವ ಅಶೋಕ್
Update: 2022-08-27 20:13 IST
ಬೆಂಗಳೂರು, ಆ.27: ಮುಸ್ಲಿಮ್ ಸಂಘಟನೆಗಳು ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೋಸ್ಕರ ಹೋರಾಟ ಮಾಡುತ್ತಿದ್ದಾರೆ. ಅವರು ಸುಪ್ರೀಂಕೋರ್ಟ್‍ಗೆ ಸೋಮವಾರ ಮನವಿ ಸಲ್ಲಿಸುತ್ತಾರೆ ಎಂಬ ಮಾಹಿತಿ ಇದೆ ಎಂದು ಕಂದಾಯ ಸಚಿವ ಆರ್. ಅಶೋಕ್ (R. Ashoka) ತಿಳಿಸಿದ್ದಾರೆ.
ಶನಿವಾರ ನಗರದ ರೇಸ್‍ಕೋರ್ಸ್ ಬಳಿಯಿರುವ ಸಿಎಂ ನಿವಾಸದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‍ಗೆ ಅರ್ಜಿ ಹಾಕುವವರು ಅರ್ಜಿಯನ್ನು ಹಾಕಿಕೊಳ್ಳಲಿ, ನಾನು ಕಂದಾಯ ಸಚಿವನಾಗಿ ಆಮೇಲೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ಸಿಎಂ ಜೊತೆ ಸುಮಾರು 2 ಗಂಟೆಗಳ ಕಾಲ ಚರ್ಚೆ ನಡೆದಿದ್ದು, ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.