ಮೈಸೂರು: ಪತ್ನಿ ಹತ್ಯೆಗೈದ ಪತಿ
Update: 2022-08-27 22:49 IST
ಮೈಸೂರು,ಆ.27: ಪತ್ನಿ ಮೇಲೆ ಅನುಮಾನಗೊಂಡಿದ್ದ ಪತಿ ಆಕೆಯನ್ನು ಮಚ್ಚಿನಿಂದ ಕೊಚ್ಚಿ ಕೊಲಗೈದಿರುವ ಘಟನೆ ಮೈಸೂರಿನ ಬನ್ನಿಮಂಟಪದ ಡಾಕ್ಟರ್ಸ್ ಕಾಲೋನಿಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
29 ವರ್ಷದ ರಾಧ ಕೊಲೆಯಾದ ಮಹಿಳೆಯಾಗಿದ್ದು, ಹತ್ಯೆಗೈದ ಪತಿ ರಾಜೇಶ್ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಇವರಿಗೆ ಇಬ್ಬರು ಚಿಕ್ಕ ಮಕ್ಕಳಿದ್ದರು ಎನ್ನಲಾಗಿದೆ.
ಡಾ.ವೆಂಕಟೇಶ್ ಎಂಬವರ ಮನೆಯಲ್ಲಿ ಕಳೆದ ಏಳೆಂಟು ವರ್ಷಗಳಿಂದ ಬಾಡಿಗೆಗೆ ವಾಸವಿದ್ದ ರಾಜೇಶ ಮೂಲತಃ ಮಾಂಬಳ್ಳಿಯವರು ಎನ್ನಲಾಗಿದೆ. ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್ ಪೆಕ್ಟರ್ ಅಝರುದ್ದೀನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.