×
Ad

ಸಿಪಿಐ ದ.ಕ., ಉಡುಪಿ ಜಿಲ್ಲಾ 24ನೇ ಸಮ್ಮೇಳನಕ್ಕೆ ಚಾಲನೆ

Update: 2022-08-27 23:05 IST

ಬಂಟ್ವಾಳ, ಆ.27: ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ 24ನೇ ಸಮ್ಮೇಳನಕ್ಕೆ ಬಂಟ್ವಾಳ ಬೈಪಾಸ್ ನಲ್ಲಿರುವ ಕಾ. ಎ.ಶಾಂತಾರಾಮ ಪೈ ಸ್ಮಾರಕ ಭವನದಲ್ಲಿ ಶನಿವಾರ ಬೆಳಗ್ಗೆ ಧ್ವಜಾರೋಹನ ಮೂಲಕ ಚಾಲನೆ ನೀಡಲಾಯಿತು. 

ಮೂರು ದಿನಗಳ ಕಾಲ ನಡೆಯಲಿರುವ ಸಮ್ಮೇಳನದ ಧ್ವಜಾರೋಹನವನ್ನು ಹಿರಿಯ ಸಿಪಿಐ ಮುಖಂಡ ಎ.ಪ್ರಭಾಕರ ರಾವ್ ನೆರವೇರಿಸಿದರು. ಬಳಿಕ ನಡೆದ ಪ್ರತಿನಿಧಿ ಸಮಾವೇಶವನ್ನು ಸಿಪಿಐ ರಾಜ್ಯ ಕಾರ್ಯದರ್ಶಿ ಕಾ. ಸಾತಿ ಸುಂದರೇಶ್ ಉದ್ಘಾಟಿಸಿ ಮಾತನಾಡಿದರು. 

ಪ್ರತಿನಿಧಿ ಸಭೆಯ ಅಧ್ಯಕ್ಷ ಮಂಡಳಿಯ ಪ್ರಮುಖರಾದ ಪ್ರೇಮನಾಥ ಕೆ., ರತಿ ಎಸ್. ಭಂಡಾರಿ, ಎಂ.ಪಿ.ರಾವ್ ಹಾಗೂ ಅತಿಥಿಗಳಾಗಿ ಸಿಪಿಐ ದ.ಕ. ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಜಿಲ್ಲಾ ಸಹ ಕಾರ್ಯದರ್ಶಿ ವಿ.ಸೀತರಾಮ್, ಸಿಪಿಐ ರಾಜ್ಯ ಮಂಡಳಿ ಸದಸ್ಯ ಕಾ. ಬಿ.ಶೇಖರ್, ಸಿಪಿಐ ಮಂಗಳೂರು ತಾಲೂಕು ಕಾರ್ಯದರ್ಶಿ ಎಂ.ಕರುಣಾಕರ್, ಭಾರತೀಯ ರಾಜ್ಯ ಮಹಿಳಾ ಒಕ್ಕೂಟ ಕಾರ್ಯದರ್ಶಿ ಭಾರತಿ ಪ್ರಶಾಂತ್, ಸಮ್ಮೇಳನದ ಪೂರ್ವ ಸಿದ್ಧತಾ ಸಮಿತಿ ಸಂಚಾಲಕ ಬಿ.ಬಾಬು ಭಂಡಾರಿ, ಸಿಪಿಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುರೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. 

ಸಿಪಿಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುರೇಶ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News