ಸೋಮವಾರ ಸುಪ್ರೀಂಕೋರ್ಟ್‌ನಿಂದ ಸಿದ್ದೀಕ್ ಕಪ್ಪನ್ ಜಾಮೀನು ಅರ್ಜಿ ವಿಚಾರಣೆ

Update: 2022-08-28 17:33 GMT

ಅಹ್ಮದಾಬಾದ್, ಆ. 28:  ಹಾತ್ರಸ್ ಪಿತೂರಿ ಪ್ರಕರಣದಲ್ಲಿ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಹಾಗೂ ಇತರ ಆರೋಪಗಳ ಅಡಿಯಲ್ಲಿ ಉತ್ತರ ಪ್ರದೇಶ ಸರಕಾರ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಕೇರಳದ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರು ಸಲ್ಲಿಸಿದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

ಸಿದ್ದೀಕ್ ಕಪ್ಪನ್ ಅವರ ಜಾಮೀನು ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಹಾಗೂ ನ್ಯಾಯಮೂರ್ತಿ ರವೀಂದ್ರ ಭಟ್ ಅವರನ್ನು ಒಳಗೊಂಡ ಪೀಠ ವಿಚಾರಣೆ ನಡೆಸಲಿದೆ. ಪ್ರಸ್ತುತ ಅರ್ಜಿಯಲ್ಲಿ ಸಂವಿಧಾನ ನೀಡಿದ ಸ್ವಾತಂತ್ರ್ಯದ ಹಕ್ಕು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೂಡ ಎತ್ತಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಕಪ್ಪನ್ ಅವರ ಜಾಮೀನು ಅರ್ಜಿಯನ್ನು ಅಲಹಾಬಾದ್ ಉಚ್ಚ ನ್ಯಾಯಾಲಯದ ಲಕ್ನೋ ಪೀಠ ಆಗಸ್ಟ್ 2ರಂದು ತಿರಸ್ಕರಿಸಿತ್ತು. ಉಚ್ಚ ನ್ಯಾಯಾಲಯದ ಈ ಆದೇಶದ ವಿರುದ್ಧ ಅವರು ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News