ರಾಜ್ಯದಲ್ಲಿಂದು 929 ಕೊರೋನ ಪ್ರಕರಣ ದೃಢ, ಐವರ ಸಾವು

Update: 2022-08-28 18:06 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು: ರಾಜ್ಯದಲ್ಲಿ ರವಿವಾರ 929 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಐವರು ಮೃತಪಟ್ಟಿದ್ದು, 987 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 40,49,411ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,190ಕ್ಕೆ ತಲುಪಿದೆ. 

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 7,859ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.  

ಐವರ ಸಾವು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಬಳ್ಳಾರಿ 2, ಧಾರವಾಡ 1, ಶಿವಮೊಗ್ಗ 1, ಉತ್ತರಕನ್ನಡ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.  

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 929 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 22, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 25, ಬೆಂಗಳೂರುನಗರ 429, ಚಾಮರಾಜನಗರ 30, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 5, ಚಿತ್ರದುರ್ಗ 2, ದಕ್ಷಿಣ ಕನ್ನಡ 20, ದಾವಣಗೆರೆ 1, ಧಾರವಾಡ 15, ಗದಗ 1, ಹಾಸನ 51, ಹಾವೇರಿ 4, ಕಲಬುರಗಿ 6, ಕೊಡಗು 18, ಕೋಲಾರ 42, ಕೊಪ್ಪಳ 4, ಮಂಡ್ಯ 9, ಮೈಸೂರು 77, ರಾಯಚೂರು 17, ರಾಮನಗರ 29, ಶಿವಮೊಗ್ಗ 46, ತುಮಕೂರು 28, ಉಡುಪಿ 8, ಉತ್ತರಕನ್ನಡ 13, ವಿಜಯಪುರ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News