ಸಿದ್ದೀಕ್ ಕಪ್ಪನ್ ಪ್ರಕರಣ: ಉತ್ತರ ಪ್ರದೇಶ ಸರಕಾರಕ್ಕೆ ನೊಟೀಸ್ ಜಾರಿ, ಸೆ.9 ರಂದು ಅಂತಿಮ ವಿಚಾರಣೆ

Update: 2022-08-29 08:32 GMT

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧನದಲ್ಲಿರುವ  ಪತ್ರಕರ್ತ ಸಿದ್ದೀಕ್ ಕಪ್ಪನ್ ಪ್ರಕರಣಕ್ಕೆ(Siddique Kappan case) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಉತ್ತರ ಪ್ರದೇಶ ಸರಕಾರಕ್ಕೆ ನೋಟಿಸ್ (SC issues notice to Uttar Pradesh government)ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು   ಸೆಪ್ಟೆಂಬರ್ 9 ರಂದು ಪ್ರಕರಣದ ಮುಂದಿನ ವಿಚಾರಣೆಯನ್ನು ನಡೆಸಲಿದ್ದು, ಆಗ ಅದನ್ನು ಇತ್ಯರ್ಥಪಡಿಸಲಾಗುವುದು ಎಂದು ಹೇಳಿದೆ. ಸೆಪ್ಟೆಂಬರ್ 5 ರೊಳಗೆ ಉತ್ತರ ಪ್ರದೇಶ ಸರಕಾರ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆಯೂ ಅವರು ಸೂಚಿಸಿದ್ದಾರೆ.

ಅಕ್ಟೋಬರ್ 5, 2020 ರಂದು ಕಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು, ಕಪ್ಪನ್  ಇತರ ಮೂವರೊಂದಿಗೆ ಕಾರಿನಲ್ಲಿ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದಾಗ ಪೊಲೀಸರು ಕಪ್ಪನ್ ರನ್ನು ವಶಕ್ಕೆ ಪಡೆದಿದ್ದರು. ಹತ್ರಾಸ್‌ ನಲ್ಲಿ ದಲಿತ ಮಹಿಳೆಯೊಬ್ಬರು ಮೇಲ್ಜಾತಿ ಠಾಕೂರ್ ಸಮುದಾಯದ ನಾಲ್ವರಿಂದ  2020 ರ ಸೆಪ್ಟೆಂಬರ್ 14 ರಂದು ಸಾಮೂಹಿಕ ಅತ್ಯಾಚಾರ ಹಾಗೂ  ಹತ್ಯೆಗೆ ಒಳಗಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News