ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಮೆಟ್ಟಿಲೇರಿದ ವಕ್ಫ್‌ ಮಂಡಳಿ

Update: 2022-08-29 11:16 GMT

ಬೆಂಗಳೂರು, ಆ.29: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಚಾಮರಾಜಪೇಟೆ ಈದ್ಗಾ ಮೈದಾನದದಲ್ಲಿ ಗಣೇಶೋತ್ಸವ ಆಚರಣೆ ಮಾಡಲು ಸರ್ಕಾರಕ್ಕೆ ನೀಡಿರುವ ಹೈಕೋರ್ಟ್‌ (High Court of Karnataka) ಆದೇಶವನ್ನು ಪ್ರಶ್ನಿಸಿ ಕರ್ನಾಟಕ ವಕ್ಫ್‌ ಮಂಡಳಿಯು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. 

‘ಈ ವಿಚಾರವನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು’ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಹಾಗೂ ನ್ಯಾಯಮೂರ್ತಿ ಎಸ್.ರವೀಂದ್ರ ಭಟ್‌ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಎದುರು ಮಂಡಳಿ ಪರವಾಗಿ ಹಿರಿಯ ವಕೀಲರು ವಾದ ಮಂಡಿಸಿದರು.  ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸಲು ಪೀಠವು ಒಪ್ಪಿದೆ.

ಇದನ್ನೂ ಓದಿ>>> ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ

ಈದ್ಗಾ ಮೈದಾನದ ಮಾಲಕತ್ವ ಕುರಿತು ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಉಚ್ಛ ನ್ಯಾಯಾಲಯದ ವಿಭಾಗೀಯ ನ್ಯಾಯಪೀಠ, ಗಣೇಶೋತ್ಸವ ಆಚರಣೆಗೆ ಶುಕ್ರವಾರ (ಆ.26) ಅನುಮತಿ ನೀಡಿತ್ತು. 

ಇದನ್ನೂ ಓದಿ:  ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಸರಕಾರ ಅನುಮತಿ ನೀಡುವ ಮುನ್ನವೇ ಗಣೇಶೋತ್ಸವ ಆಚರಣೆಗೆ ಸಿದ್ಧತೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News