ಮುರುಘಾ ಶರಣರ ವಿರುದ್ಧ ಪ್ರಕರಣ; ನಿಷ್ಪಕ್ಷಪಾತ ತನಿಖೆ ನಡೆಸಲು ಹೊರ ರಾಜ್ಯಕ್ಕೆ ವರ್ಗಾಯಿಸಿ: ಲೆಹರ್ ಸಿಂಗ್ ಆಗ್ರಹ

Update: 2022-08-29 14:38 GMT

ಬೆಂಗಳೂರು, ಆ. 29: ‘ಚಿತ್ರದುರ್ಗದ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಕುರಿತು ಸರಕಾರ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲದೆ, ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು. ಆ ನಿಟ್ಟಿನಲ್ಲಿ ಕರ್ನಾಟಕದಿಂದ ಹೊರ ರಾಜ್ಯಗಳಲ್ಲಿ ಪ್ರಕರಣ ವರ್ಗಾಯಿಸಿದರೆ ನ್ಯಾಯ ದೊರಕಿಸಿಕೊಡಬೇಕು' ಎಂದು ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಆಗ್ರಹಿಸಿದ್ದಾರೆ. 

ಸೋಮವಾರ ಈ ಸಂಬಂಧ ಪತ್ರ ಬರೆದಿರುವ ಅವರು, ‘ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯಾಧೀಶ ಗಿರೀಶ್ ಬಾಲಮಂದಿರಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮಠದಲ್ಲಿನ ಮಕ್ಕಳನ್ನ ಭೇಟಿ ಮಾಡಿ ಸಂತ್ರಸ್ತರಿಗೆ ಕಾನೂನು ಸಲಹೆ ನೀಡಲು ನೀಡಿದ್ದು, ಇದೇ ವೇಳೆ ಬಾಲಮಂದಿರದ ಸಿಬ್ಬಂದಿಗಳ ಬಳಿ ಮಾಹಿತಿ ಪಡೆದು ತೆರಳಿದ್ದಾರೆ. ಈ ಮಧ್ಯೆ ರಾಜ್ಯ ಮಕ್ಕಳ ಆಯೋಗದ ಅಧ್ಯಕ್ಷರು, ಸದಸ್ಯರ ಹಾಗೂ ಮಕ್ಕಳ ರಕ್ಷಣಾ ಸಮಿತಿ ಭೇಟಿ ನೀಡಿ ಸಂತ್ರಸ್ತ ಬಾಲಕಿಯರ ಬಳಿ ಮಾಹಿತಿ ಕಲೆಹಾಕುವ ಸಾಧ್ಯತೆ ಇದೆ. 

ಇದನ್ನೂ ಓದಿ: ನಾನು ನಿಮ್ಮ ಮನೆ ಜೀತಕ್ಕಿಲ್ಲ, ಆರೋಪ ಸಾಬೀತು ಮಾಡಿದರೆ ನೇಣಿಗೇರಲು ಸಿದ್ಧ: ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಆಕ್ರೋಶ

ಸ್ಥಳ ಮಹಜರ ನಡೆಸಲು ಪೊಲೀಸ್ ಭದ್ರತೆಯೊಂದಿಗೆ ಕೃತ್ಯ ನಡೆದ ಸ್ಥಳಕ್ಕೆ ಕರೆದೊಯ್ಯುವ ಸಾಧ್ಯತೆ ಇದೆ. ಸ್ಥಳ ಮಹಜರ್ ನಂತರ ಸಂತ್ರಸ್ತರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿಕೊಳ್ಳಬೇಕಿರುತ್ತದೆ. ಹೀಗಾಗಿ ಸ್ಥಳೀಯವಾಗಿ ತನಿಖೆ ನಡೆಸಲು ಹಾಗೂ ಭದ್ರತೆ ದೃಷ್ಟಿಯಿಂದ ಹೊರ ರಾಜ್ಯಗಳಿಗೆ ಪ್ರಕರಣವನ್ನು ವರ್ಗಾಯಿಸುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News