×
Ad

ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ: ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ

Update: 2022-08-29 21:12 IST

ಬೆಂಗಳೂರು, ಆ.29: ಅರಬ್ಬಿ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆ.30ರಿಂದ ಸೆ.1ರವರೆಗೆ ಭಾರೀ ಮಳೆಯಾಗುವ (RAIN) ಸಾಧ್ಯತೆಗಳಿವೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಅರಬ್ಬಿ ಸಮುದ್ರದ ಕೇರಳ ಭಾಗದಲ್ಲಿ ಮೇಲ್ಮೈ ಸುಳಿಗಾಳಿ, ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ, ವಿದರ್ಭದಿಂದ ಆಂಧ್ರಪ್ರದೇಶದ ದಕ್ಷಿಣ ತುದಿಯವರೆಗೆ ಟ್ರಫ್ ಹಬ್ಬಿರುವುದರಿಂದ ರಾಜ್ಯದ ಒಳನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. 

ಮಂಗಳವಾರ ಬೆಳಗ್ಗೆ 8.30ರ ತನಕ ಕಲಬುರಗಿ, ಗದಗ, ಧಾರವಾಡ, ಹಾವೇರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ, ರಾಮನಗರ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. 

ಮಂಗಳವಾರದ ಬಳಿಕ ರಾಜ್ಯದ ಒಳನಾಡು ಮತ್ತು ಕರಾವಳಿಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News