ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ಶಿಬಿರ
ಮಂಗಳೂರು : ಪಶ್ಚಿಮ ವಲಯ ಪೊಲೀಸ್ ಮತ್ತು ಆಂತರಿಕ ಭದ್ರತಾ ವಿಭಾಗ ಬೆಂಗಳೂರು ಇದರ ಸಹಯೋಗ ದಲ್ಲಿ ಪಶ್ಚಿಮ ವಲಯ ವ್ಯ್ಪಾಪ್ತಿಯ ದ.ಕ., ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 27 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗಕ್ಕೆ ಡ್ರೋನ್ ಅಪರೇಟ್ ಮಾಡುವ ಬಗ್ಗೆ ಎರಡು ವಾರಗಳ ತರಬೇತಿ ಶಿಬಿರಕ್ಕೆ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ದೇಶದಲ್ಲೇ ಕರ್ನಾಟಕದ ಪಶ್ಚಿಮ ವಲಯ ಪೊಲೀಸ್ ವಿಭಾಗವು ಪ್ರಥಮವಾಗಿ ಈ ತರಬೇತಿಯನ್ನು ಆಯೋಜಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಡ್ರೋನ್ ಕುರಿತ ಮಾಹಿತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತರಬೇತಿ ನೀಡಲಾಗುತ್ತದೆ. ರಾತ್ರಿ ವೇಳೆ ಸೂಕ್ಷ್ಮ ಪ್ರದೇಶ, ಕಾಡಿ-ಬೆಟ್ಟ-ಗುಡ್ಡ ಪ್ರದೇಶಗಳಲ್ಲಿ ಕೂಡ ಡ್ರೋನ್ ಹಾರಿಸುವ ಬಗ್ಗೆ ಎಂದು ತರಬೇತಿ ನೀಡಲಾಗುತ್ತದೆ ಎಂದು ಹೇಳಿದರು.
ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.