​ಮಡಿಕೇರಿ; ಕೋಳಿ ಸಾಗಾಟದ ಲಾರಿ ಪಲ್ಟಿ: ಚಾಲಕ ಸ್ಥಳದಲ್ಲೇ ಮೃತ್ಯು

Update: 2022-08-30 03:15 GMT

ಮಡಿಕೇರಿ : ಕೋಳಿ ಸಾಗಾಟದ ಲಾರಿಯೊಂದು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕೊಡಗರಹಳ್ಳಿ ಬಳಿ ನಡೆದಿದೆ.

ಮಂಗಳೂರು ಮೂಲದ ನಾಗಭೂಷಣ್ ಮೃತರು ಎಂದು ಗುರುತಿಸಲಾಗಿದೆ.

ಲಾರಿ ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದ್ದು, ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News