ವಿಶ್ವದ ಅತೀ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ ಗೌತಮ್‌ ಅದಾನಿ

Update: 2022-08-30 07:00 GMT

ಹೊಸದಿಲ್ಲಿ: ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ(Gautam Adani) ಅವರು ಬ್ಲೂಂಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್(Bloomberg Billionaires Index) ನಲ್ಲಿ ಜಗತ್ತಿನ ಮೂರನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹಮ್ಮಿದ್ದಾರೆ.  ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ಟಾಪ್ ಮೂರು ಸ್ಥಾನಕ್ಕೇರಿದ ಮೊದಲ ಏಷ್ಯಾದ ವ್ಯಕ್ತಿಯೆಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.

137.4 ಬಿಲಿಯನ್ ಡಾಲರ್ ಸಂಪತ್ತಿನೊಂದಿಗೆ ಅದಾನಿ ಅವರು ಫ್ರಾನ್ಸ್ ದೇಶದ ಬರ್ನಾರ್ಡ್ ಅರ್ನಾಲ್ಟ್ ಅವರನ್ನು  ಹಿಂದಿಕ್ಕಿ ಮೂರನೇ ಸ್ಥಾನ ಗಿಟ್ಟಿಸಿದ್ದಾರೆ. ಎಲಾನ್ ಮಸ್ಕ್ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಈ ಸೂಚ್ಯಂಕದಲ್ಲಿ ಟಾಪ್ ಸ್ಥಾನದಲ್ಲಿದ್ದರೆ ಎರಡನೇ ಸ್ಥಾನದಲ್ಲಿ ಅಮೆಝಾನ್ ಮುಖ್ಯಸ್ಥ ಜೆಫ್ ಬೆಝೋಸ್ ಇದ್ದಾರೆ.

ಭಾರತದಲ್ಲಿ ಹಲವಾರು ಕ್ಷೇತ್ರಗಳಿಗೆ ಲಗ್ಗೆಯಿಟ್ಟಿರುವ ಅದಾನಿ ಸಮೂಹದ ಮುಖ್ಯಸ್ಥರಾದ ಗೌತಮ್ ಅದಾನಿ ಈ ವರ್ಷವೊಂದರಲ್ಲಿಯೇ ತಮ್ಮ ಸಂಪತ್ತಿಗೆ 60.9 ಬಿಲಿಯನ್ ಡಾಲರ್ ಸೇರ್ಪಡೆಗೊಳಿಸಿದ್ದಾರೆ. ಫೆಬ್ರವರಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಅದಾನಿ ಕಳೆದ ತಿಂಗಳು ಮೈಕ್ರೊಸಾಫ್ಟ್ ಮುಖ್ಯಸ್ಥ ಬಿಲ್ ಗೇಟ್ಸ್ ಅವರನ್ನೂ ಹಿಂದಿಕ್ಕಿ ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಗಿಟ್ಟಿಸಿದ್ದರು. ಇದೀಗ ಬ್ಲೂಮ್‍ಬರ್ಗ್ ಬಿಲಿಯನೇರ್ಸ್ ಪಟ್ಟಿಯಲ್ಲಿ ಅವರು ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ನಿಮ್ಮೊಂದಿಗೆ ಸಿಹಿ ಸುದ್ದಿಯನ್ನು ಹಂಚಿಕೊಳ್ಳಲು ಉತ್ಸುಕಳಾಗಿದ್ದೇನೆ ಎಂದ ರಮ್ಯಾ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News