×
Ad

ವಿಜಯಪುರ | ಕಾರು- ರಾಜಹಂಸ ಬಸ್ ಢಿಕ್ಕಿ: ಓರ್ವ ಮೃತ್ಯು; ಐವರಿಗೆ ಗಾಯ

Update: 2022-08-30 12:26 IST

ವಿಜಯಪುರ, ಆ.30: ಬೊಲೆರೊ ಕಾರು ಮತ್ತು ಕೆಎಸ್ಸಾರ್ಟಿಸಿ ರಾಜಹಂಸ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಓರ್ವ ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ನಸುಕಿನ ಮೂರು ಗಂಟೆ ಸುಮಾರಿಗೆ ಕೊಲ್ಹಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಕೃಷ್ಣಾ ನದಿ ಸೇತುವೆ ಮೇಲೆ ನಡೆದಿರುವುದು ವರದಿಯಾಗಿದೆ.

ಮೃತರನ್ನು ಕಾರಿನಲ್ಲಿದ್ದ ಪ್ರಯಾಣಿಕ ಒಡಿಶಾ ರಾಜ್ಯದ ಸುಂದರಘರ್ ಜಿಲ್ಲೆಯ ಸಂದೀಪ್ ಶರ್ಮಾ ನಾಯಕ್ (30) ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿಯಿಂದ ವಿಜಯಪುರದತ್ತ ಹೋಗುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ರಾಜಹಂಸ ಬಸ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಈ ಬಗ್ಗೆ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನಿನ್ನೆ ಬಂದಿದ್ದರೆ ಹೆದ್ದಾರಿಯಲ್ಲೇ ಈಜಾಡಬಹುದಿತ್ತು: ಸಂಸದ ಪ್ರತಾಪ್ ಸಿಂಹರನ್ನು ಕುಟುಕಿದ ಕುಮಾರಸ್ವಾಮಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News