×
Ad

ನಿರೀಕ್ಷಣಾ ಜಾಮೀನು ಕೋರಿ ಚಿತ್ರದುರ್ಗ ನ್ಯಾಯಾಲಯದ ಮೊರೆ ಹೋದ ಮುರುಘಾಶ್ರೀ

Update: 2022-08-30 12:41 IST

ಚಿತ್ರದುರ್ಗ: ಹಾಸ್ಟೆಲ್‌ಗಳಲ್ಲಿ ವಾಸವಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದ ಪೀಠಾಧ್ಯಕ್ಷ ಡಾ.ಶಿವಮೂರ್ತಿ ಮುರುಘಾ ಶರಣರು(Shivamurthy Muruga Sharana) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ(Anticipatory Bail) ಚಿತ್ರದುರ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಸೋಮವಾರ ಪ್ರಾಸಿಕ್ಯೂಷನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದ್ದಾರೆ. 

ಪೊಲೀಸರು ಇತರ ನಾಲ್ವರು ಆರೋಪಿಗಳಾದ ಶಿವಮೂರ್ತಿ ಮುರುಘಾ (ಹಾಸ್ಟೆಲ್ ವಾರ್ಡನ್) ಅಕ್ಕಮಹಾದೇವಿ ರಶ್ಮಿ (ಮಠದ ಅನುಯಾಯಿ), ಪರಶಿವಯ್ಯ ಬಸವಾದಿತ್ಯ (ಮಠದ ಪದಾಧಿಕಾರಿ) ಮತ್ತು ಗಂಗಾಧರಯ್ಯ (ವಕೀಲರು) ಸಹಿತ ತನ್ನನ್ನು ಆರೋಪಿಯಾಗಿ ಹೆಸರಿಸಿದ್ದ ಹಿನ್ನೆಲೆಯಲ್ಲಿ ಶಿವಮೂರ್ತಿ ಮುರುಘಾ ಶರಣರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದಾರೆ. ಒಡನಾಡಿ ಸೇವಾಸಂಸ್ಥೆಯ ಸಹಾಯದಿಂದ ಈ ವಿದ್ಯಾರ್ಥಿನಿಯರು ಪ್ರಕರಣ ದಾಖಲಿಸಿದ್ದರು.

ಎನ್‌ಜಿಒ ನೀಡಿದ ದೂರಿನ ಆಧಾರದ ಮೇಲೆ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾಯಿಸಲಾಗಿದ್ದು, ವಿದ್ಯಾರ್ಥಿಗಳನ್ನು ಜಿಲ್ಲಾ ಬಾಲ ಮಂದಿರಕ್ಕೆ ಕರೆತಂದು ಹೇಳಿಕೆ ದಾಖಲಿಸಲಾಗಿದೆ ಹಾಗೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಷಯ ಹೊರಬಿದ್ದ ನಂತರ ನ್ಯಾಯಾಲಯವು ದೂರಿನಲ್ಲಿ ಉಲ್ಲೇಖಿಸಿರುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್, ದೂರುದಾರ ಮತ್ತು ಎಲ್ಲಾ ಸಂತ್ರಸ್ತರಿಗೆ ನೋಟಿಸ್ ಜಾರಿ ಮಾಡಿದೆ.

ಸೆಪ್ಟೆಂಬರ್ 1 ರಂದು ಪ್ರಕರಣದ ವಿಚಾರಣೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News