ಮಂಗಳೂರು; ಸೆ. 2ರಂದು ಶಾಲಾ ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ ಡಾ. ರಾಜೇಂದ್ರ
Update: 2022-08-30 16:52 IST
ಮಂಗಳೂರು, ಆ.30: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ನಗರದ ಶಾಲಾ-ಕಾಲೇಜುಗಳಿಗೆ ಸೆ. 2ರಂದು ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಸೆ.2ರಂದು ಮಂಗಳೂರು ನಗರದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸೆ.2ರಂದು ನಗರದ ಹಲವೆಡೆ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆಗಳು ಇರುವ ಕಾರಣದಿಂದ ಜನ ಸಂಚಾರ ಮತ್ತು ವಾಹನ ದಟ್ಟಣೆಯಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.