ಸೆ.2ರಂದು ಸಿಎಂ ಬಸವರಾಜ ಬೊಮ್ಮಾಯಿ ದ.ಕ. ಜಿಲ್ಲಾ ಪ್ರವಾಸ
Update: 2022-08-30 19:04 IST
ಮಂಗಳೂರು, ಆ.30: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆ.2ರಂದು ಮಂಗಳೂರು ಪ್ರವಾಸ ಕೈಗೊಂಡಿದ್ದಾರೆ. ಅಂದು ಮಧ್ಯಾಹ್ನ 12.55ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಬರಮಾಡಿಕೊಳ್ಳಲಿದ್ದಾರೆ.
ಬಳಿಕ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಜೊತೆ ನವಮಂಗಳೂರು ಬಂದರ್‌ಗೆ ತೆರಳಲಿದ್ದಾರೆ. 2.45ಕ್ಕೆ ನವಮಂಗಳೂರು ಬಂದರ್‌ನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ/ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.20ಕ್ಕೆ ಪ್ರಧಾನಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೀಳ್ಕೊಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.