×
Ad

ಗೌರಿ-ಗಣೇಶ ಚತುರ್ಥಿ ಆಚರಣೆಯ ಮಾರ್ಗಸೂಚಿ ಪ್ರಕಟ; ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಸದಂತೆ ಸೂಚನೆ

Update: 2022-08-30 19:08 IST

ಮಂಗಳೂರು, ಆ.30: ದ.ಕ.ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಆ.31ರಂದು ಆಚರಿಸಲಿರುವ ಗೌರಿ-ಗಣೇಶ ಚತುರ್ಥಿ ಹಬ್ಬಕ್ಕೆ ಸಂಬಂಧಿಸಿ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಪರಿಸರ ಸ್ನೇಹಿ ಜೇಡಿ ಮಣ್ಣಿನಿಂದ ತಯಾರಿಸಿದ ಗೌರಿ ಮತ್ತು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಮನೆಯಲ್ಲೆ ವಿಸರ್ಜಿಸಿ ಪರಿಸರ ಮಾಲಿನ್ಯವನ್ನು ನಿಯಂತ್ರಿಸಲು ಸಹಕರಿಸುವಂತೆ ಮನವಿ ಮಾಡಿದೆ. ಅಲ್ಲದೆ ಹಬ್ಬದ ದಿನಗಳಲ್ಲಿ ರಾತ್ರಿ 10ರಿಂದ  ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಸದಂತೆ ಸೂಚಿಸಿದೆ.

ಪರಿಸರದ ವಿರುದ್ಧ ಪರಿಣಾಮ ಬೀರುವಂತಹ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಹಾಗೂ ರಾಸಾಯನಿಕ ಬಣ್ಣಗಳನ್ನು ಒಳಗೊಂಡ ಗೌರಿ-ಗಣೇಶ ಮೂರ್ತಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಗೌರಿ-ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದೊಳಗೆ, ಮನೆ ಅಥವಾ ಸರಕಾರಿ/ಖಾಸಗಿ/ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸುವುದು. ಸಾರ್ವಜನಿಕವಾಗಿ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಸ್ಠಾಪಿಸುವವರು ಗಣೇಶಮೂರ್ತಿಯನ್ನು 5 ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಚಿಕ್ಕ-ಚಿಕ್ಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು.

ಪಾರಂಪರಿಕ ಗೌರಿ-ಗಣೇಶೋತ್ಸವಕ್ಕಾಗಿ, ಗಣೇಶೋತ್ಸವ ಸಮಿತಿಗಳು/ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಸ್ಥಳೀಯ ಚುನಾಯಿತ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು. ಗೌರಿ-ಗಣೇಶ ಹಬ್ಬದ ಸಂದರ್ಭ ಪಟಾಕಿ ಸಿಡಿಸಬೇಡಿ, ಗೌರಿ- ಗಣೇಶ ಹಬ್ಬದಲ್ಲಿ ರಸ್ತೆ, ಚರಂಡಿಯಲ್ಲಿ ಹೂವಿನ ಹಾರ, ತಟ್ಟೆ, ಲೋಟ, ಎಲೆ ಎಸೆಯಬೇಡಿ, ಕಸದ ವಾಹನ ಬಳಸುವಂತೆ ಮನವಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News