ಸೆ. 30ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ: ಉಡುಪಿ ಡಿಸಿ ಕೂರ್ಮಾರಾವ್
Update: 2022-08-30 19:20 IST
ಉಡುಪಿ, ಆ.30: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಸೆಪ್ಟಂಬರ್ 30ರವರೆಗೆ ಲಘು ವಾಹನ, ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಿ, ಭಾರಿ ವಾಹನ ಸಂಚಾರ ವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.