ವಿಶೇಷ ಮಕ್ಕಳ ಪೊಲೀಸ್ ಅಧಿಕಾರಿಗಳಿಗೆ ಸಂವೇದನಾಶೀಲ ತರಬೇತಿ
ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶೇಷ ಮಕ್ಕಳ ಪೊಲೀಸ್ ಘಟಕ ಅಧಿಕಾರಿಗಳಿಗೆ ಸಂವೇದನಾಶೀಲ ತರಬೇತಿ ಕಾರ್ಯಾಗಾರವನ್ನು ಮಂಗಳವಾರ ಉಡುಪಿ ತಾಪಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಉದ್ಘಾಟಿಸಿ ದರು. ಅಧ್ಯಕ್ಷತೆಯನ್ನು ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವೀಣಾ ವಿವೇಕಾನಂದ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಧೀಶ ಮತ್ತು ಬಾಲನ್ಯಾಯ ಮಂಡಳಿಯ ಅಧ್ಯಕ್ಷ ಸೋಮನಾಥ್, ಉಡುಪಿ ತಾಪಂ ಕಾರ್ಯನಿರ್ವಾಹಣಾ ಧಿಕಾರಿ ವಿಜಯ, ಡಿವೈಎಸ್ಪಿಸುಧಾಕರ್ ನಾಯಕ್, ಉಡುಪಿ ಹಿರಿಯ ಮಕ್ಕಳ ಕಲ್ಯಾಣಧಿಕಾರಿ ಹಾಗೂ ನಗರ ಠಾಣಾ ಪೊಲೀಸ್ ನಿರೀಕ್ಷಕ ಪ್ರಮೋದ್ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಅಖಿಲ್ ಬಿ.ಹೆಗ್ಡೆ ಭಾಗವಹಿಸಿದ್ದರು. ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹೇಶ್ ದೇವಾಡಿಗ ಸ್ವಾಗತಿಸಿ ಕಾರ್ಯಕ್ರಮದ ನಿರೂಪಿಸಿದರು. ನಗರ ಠಾಣಾ ಪೊಲೀಸ್ ಉಪನಿರೀಕ್ಷಕ ವಾಸಪ್ಪ ನಾಯಕ್ ವಂದಿಸಿದರು.