×
Ad

ಯುವಕ ನಾಪತ್ತೆ

Update: 2022-08-30 20:43 IST

ಮಂಗಳೂರು: ಕೂಳೂರು ರಾಯಿಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮುಕೇಶ್ ಕುಮಾರ್ (24) ಎಂಬವರು ಆ.24ರಂದು ರಾತ್ರಿ ಬಸ್ ನಿಲ್ದಾಣಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಕಾಣೆಯಾಗಿದ್ದಾರೆ ಎಂದು ಕಾವೂರು ಠಾಣೆಗೆ ದೂರು ನೀಡಲಾಗಿದೆ.

ವೃತ್ತಿಯಲ್ಲಿ ಪೈಂಟಿಂಗ್ ಕೆಲಸ ಮಾಡುತ್ತಿದ್ದ ಮುಕೇಶ್ ಕುಮಾರ್ 5.5 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ಗುಂಡು ಮುಖ ಹೊಂದಿದ್ದಾರೆ. ಮನೆಯಿಂದ ಹೊರಟು ಹೋಗುವಾಗ ಕಪ್ಪು ಬಿಳಿ ಬಣ್ಣದ ಶರ್ಟ್ ಮತ್ತು ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಹಿಂದಿ, ಭೋಜಪುರಿ ಭಾಷೆ ಮಾತನಾಡುತ್ತಾರೆ. ಈ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕವರು ಕಾವೂರು ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News