ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಭದ್ರತೆಗೆ 1,500 ಪೊಲೀಸರ ನಿಯೋಜನೆ, ಪಥಸಂಚಲನ

Update: 2022-08-30 15:19 GMT

ಬೆಂಗಳೂರು, ಆ.30: ಗಣೇಶೋತ್ಸವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಚಾಮರಾಜಪೇಟೆಯಲ್ಲಿ (Chamrajpet) ಪಶ್ಚಿಮ ವಿಭಾಗದ ಪೊಲೀಸರು ಪಥಸಂಚಲನ ನಡೆಸಿ ಜಾಗೃತಿ ಮೂಡಿಸಿದರು.

ಮಂಗಳವಾರ ಚಾಮರಾಜಪೇಟೆಯ ಸೂಕ್ಷ್ಮ ಅತಿಸೂಕ್ಷ್ಮ ಪ್ರದೇಶಗಳು ಸೇರಿದಂತೆ ಬಹುತೇಕ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದರು. ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಡಿಸಿಪಿ ಲಕ್ಷ್ಮಣ್ ನಿಂಬರಗಿ ಅವರ ನೇತೃತ್ವದಲ್ಲಿ ಸಿವಿಲ್ ಹಾಗೂ ಕೆಎಸ್‍ಆರ್ಪಿಯ 1 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಪಥಸಂಚಲನ ನಡೆಸಿದರು.

ಪಥಸಂಚಲನದಲ್ಲಿ ಮೂವರು ಡಿಸಿಪಿ, 21 ಎಸಿಪಿ, 47 ಇನ್‍ಸ್ಪೆಕ್ಟರ್, 130 ಸಬ್‍ಇನ್‍ಸ್ಪೆಕ್ಟರ್, 126 ಸಹಾಯಕ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್, 900 ಮುಖ್ಯಪೇದೆ ಪೇದೆ, 120 ಮಂದಿ ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂದಿ, 10 ಕೆಎಸ್‍ಆರ್ಪಿ ತುಕಡಿಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದರು. 

ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೋರಿ ಕೆಲವು ಸಂಘಟನೆಗಳು ಮನವಿ ಸಲ್ಲಿಸಿತ್ತು, ಪರಿಸ್ಥಿತಿ ಸೂಕ್ಷ್ಮವಾಗಿರುವ ಕಾರಣಕ್ಕೆ ಈ ಭಾಗದಲ್ಲಿ ಪೊಲೀಸರು ನಿಗಾ ವಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಲಕ್ಷ್ಮಣ ನಿಂಬರಗಿ, ಸ್ಥಳೀಯರಲ್ಲಿ ಧೈರ್ಯ ತುಂಬುವ ಹಾಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ಚಾಮರಾಜಪೇಟೆ ಭಾಗದಲ್ಲಿ ಪಥಸಂಚಲನ ನಡೆಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಸುಪ್ರೀಂಕೋರ್ಟ್‌ ಅನುಮತಿ ನಿರಾಕರಣೆ, ಯಥಾಸ್ಥಿತಿ ಕಾಪಾಡಲು ಸೂಚನೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News