ಮುರುಘಾ ಶರಣ ಬಂಧನಕ್ಕೆ ದಲಿತ ನಾಯಕರ ಆಗ್ರಹ; ರಾಜ್ಯಪಾಲರಿಗೆ ಮನವಿ

Update: 2022-08-30 15:28 GMT

ಬೆಂಗಳೂರು, ಆ.30: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪಕ್ಕೆ ಸಿಲುಕಿರುವ ಚಿತ್ರದುರ್ಗ ಮುರಘಾ ಶಿವಮೂರ್ತಿ ಶರಣರನ್ನು ಕೂಡಲೇ ಬಂಧಿಸುವಂತೆ ದಲಿತ ಸಮುದಾಯ ನಾಯಕರು ಆಗ್ರಹಿಸಿದ್ದಾರೆ.

ಮಂಗಳವಾರ ಈ ಕುರಿತು ರಾಜ್ಯಪಾಲರಿಗೆ ಮನವಿ ಸಲ್ಲಿರುವ ಕನಾಟಕ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ದಸಂಸ ಒಕ್ಕೂಟದ ರಾಜ್ಯ ಸಮಿತಿ, ಈ ಕೂಡಲೇ ಮುರಘಾ ಶಿವಮೂರ್ತಿ ಶರಣರನ್ನು ಬಂಧಿಸಿ ಸಂತ್ರಸ್ತೆಗೆ ಪೊಲೀಸ್ ರಕ್ಷಣೆ ನೀಡುವಂತೆ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಸಮಿತಿಯ ಅಧ್ಯಕ್ಷ ಆರ್.ಮೋಹನ್ ರಾಜ್, ಪೋಕ್ಸೋ ಕಾಯ್ದೆ ಹಾಗೂ ದೌರ್ಜನ್ಯ ತಡೆ ಕಾಯ್ದೆ 1989ರ ಅನ್ವಯ ಮೊಕದ್ದಮೆ ದಾಖಲಾದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು. ಅಷ್ಟೇ ಅಲ್ಲದೆ, ಸರಕಾರಿ ಮಹಿಳಾ ವೈದ್ಯರ ಸಮ್ಮುಖದಲ್ಲಿ ಪರೀಕ್ಷೆಗೆ ಒಳಪಡಿಸಬೇಕು. ಆದರೆ ರಾಜ್ಯ ಸರಕಾರ ಬಲಾಢ್ಯರಿಗೆ ಒಂದು ಕಾನೂನು ಬಡವರಿಗೆ ಒಂದು ಕಾನೂನು ಎಂದು ವರ್ತಿಸುತ್ತಿದೆ ಎಂದು ದೂರಿದರು.

ಪೊಲೀಸ್ ಇಲಾಖೆ ಕೂಡ ತನ್ನ ಕರ್ತವ್ಯವನ್ನು ಕಾನೂನನ್ನು ಮರೆತು ವರ್ತಿಸುತ್ತಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ನಿನ್ನೆಯೇ ಶರಣರು ಬಹಿರಂಗವಾಗಿ ಹೇಳಿಕೆಯನ್ನು ನೀಡಿದ್ದು, ನಾನು ಈ ನೆಲದ ಕಾನೂನು ಗೌರವಿಸುತ್ತೇನೆ ಎಂದಿದ್ದಾರೆ. ಹೀಗಾಗಿ, ಅವರನ್ನು ಬಂಧಿಸಿ ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹದೇವಸ್ವಾಮಿ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News