×
Ad

ಅತ್ಲೆಟಿಕ್ ಕ್ರೀಡಾಕೂಟ: ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ಗೆ ಮೂರು ಪದಕ

Update: 2022-08-30 22:30 IST

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್  ಎಂಜಿನಿಯರಿಂಗ್‌ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಇತ್ತೀಚೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಕಿರಿಯರ ಹಾಗೂ ಹಿರಿಯರ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಎರಡು ಚಿನ್ನ ಹಾಗೂ ಒಂದು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.

23 ವರ್ಷದೊಳಗಿನ ವಿಭಾಗದಲ್ಲಿ ಕಾಲೇಜಿನ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿನಿ ಪವಿತ್ರ.ಜಿ ಟ್ರಿಪಲ್ ಜಂಪ್‌ನಲ್ಲಿ 12.52 ಮೀಟರ್ ದೂರ ಜಿಗಿಯುವ ಮೂಲಕ ನೂತನ ಕೂಟ ದಾಖಲೆಯನ್ನು ಸ್ಥಾಪಿಸಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಪವಿತ್ರ ಅವರು 5.59 ಮೀಟರ್ ಹಾರಿ ಬೆಳ್ಳಿ ಪದಕವನ್ನು ಗಳಿಸಿದ್ದಾರೆ.

ಇದೇ ವಿಭಾಗದಲ್ಲಿ ದ್ವಿತೀಯ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಕೀರ್ತಿರಾಜ್.ಕೆ.ಎಸ್ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈ ವಿದ್ಯಾರ್ಥಿಗಳು ಇತ್ತೀಚಿಗೆ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಅಂತರ್‌ ಕಾಲೇಜು ಕ್ರೀಡಾಕೂಟದಲ್ಲಿಯೂ ನೂತನ ಕೂಟ ದಾಖಲೆಗಳನ್ನು  ಸ್ಥಾಪಿಸಿದ್ದರು. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News