×
Ad

7 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2022-08-30 22:49 IST

ಬೆಂಗಳೂರು, ಆ.30: ರಾಜ್ಯ ಸರಕಾರವು 7 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ-ಡಾ.ರಿತೇಶ್ ಕುಮಾರ್ ಸಿಂಗ್, ಬೆಂಗಳೂರಿನ ಫಿಸ್ಕಲ್ ಪಾಲಿಸಿ ಇನ್ಸ್ಟಿಟ್ಯೂಟ್ ನ ಜಂಟಿ ನಿರ್ದೇಶಕಿ- ಪಲ್ಲವಿ ಆಕೃತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ- ಪ್ರಿಯಾಂಕ ಮೇರಿ ಫ್ರಾನ್ಸಿಸ್.

ಪೌರಾಡಳಿತ ಇಲಾಖೆಯ ನಿರ್ದೇಶಕಿ-ಮಂಜು ಶ್ರೀ ಎನ್., ಸಿಬ್ಬಂದಿ  ಮತ್ತು ಆಡಳಿತ ಸುಧಾರಣಾ ಇಲಾಖೆ(ಚುನಾವಣೆ)ಯ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ(ವೆಚ್ಚ)-ವೆಂಕಟೇಶ್ ಕುಮಾರ್ ಆರ್., ರಾಷ್ಟ್ರೀಯ ಜೀವನೋಪಾಯ ಯೋಜನೆಯ ಯೋಜನಾ ನಿರ್ದೇಶಕ-ಡಾ.ರಂಗಪ್ರಿಯಾ ಆರ್., ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ  ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ದಿವ್ಯಾ ಪ್ರಭು ಜಿ.ಆರ್.ಜೆ. ಅವರನ್ನು ವರ್ಗಾವಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News