ಒಂದೇ ಕುಟುಂಬದ 9 ಸದಸ್ಯರು ಆತ್ಮಹತ್ಯೆ ಗೆ ಯತ್ನ; ಸಚಿವ ಆನಂದ್ ಸಿಂಗ್ ಸೇರಿ ನಾಲ್ವರ ವಿರುದ್ಧ FIR
Update: 2022-08-31 12:48 IST
ವಿಜಯಪುರ, ಆ.31: ಪ್ರಭಾವಿಗಳಿಂದ ಕಿರುಕುಳ ಎಂದು ಆರೋಪಿಸಿ ಒಂದೇ ಕುಟುಂಬದ 9 ಸದಸ್ಯರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಂಬಂಧ ಸಚಿವ ಆನಂದ್ ಸಿಂಗ್ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.
ವಿಜಯನಗರದ ಎಸ್‌ಪಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದ ಪ್ರಕರಣ ಸಂಬಂಧ ಸಚಿವ ಆನಂದ್ ಸಿಂಗ್, ಮರಿಯಪ್ಪ, ಹನುಮಂತಪ್ಪ, ಹುಲುಗಪ್ಪ ಎಂಬ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿ. ಪೋಲಪ್ಪ ಎಂಬವರು ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 504, 506 r/w 34 IPC, 3(2)(Va) SC/ST ಕಾಯ್ದೆ ಅಡಿ ಆನಂದ್ ಸಿಂಗ್, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.