×
Ad

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಅಪಘಾತ

Update: 2022-08-31 15:40 IST
ಲಕ್ಷ್ಮಣ್ ಸವದಿ (ಫೈಲ್‌ ಫೋಟೊ)

ಚಿಕ್ಕೋಡಿ, ಆ.31: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸವದಿ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಹಾರೋಗೇರಿ ಪಟ್ಟಣದಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಕಾರಿನಲ್ಲಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಇತರ ನಾಲ್ವರು ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಹಾರೋಗೇರಿ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷ್ಮಣ ಸವದಿ ಅವರು ತೆರಳುತ್ತಿದ್ದ ಕಾರು ರಸ್ತೆ ಬದಿಗೆ ಪಲ್ಡಿಯಾಗಿ ಬಿದ್ದಿದೆ.

ಈ ವೇಳೆ ಸ್ಥಳೀಯರ ಸಹಾಯದಿಂದ ಕಾರನ್ನು ಮೇಲಕ್ಕೆ ಎತ್ತಲಾಗಿದೆ. ಕಾರಿನಲ್ಲಿ ಸಿಲುಕಿದ್ದ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News