ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ನಿಧನ

Update: 2022-08-31 12:26 GMT
Photo: Twitter

ಹೊಸದಿಲ್ಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರ ತಾಯಿ ಪಾವೊಲಾ ಮೈನೋ(Paola Maino) ಅವರು ಆ.27 ರಂದು (ಶನಿವಾರ) ಇಟಲಿಯ(Italy) ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

“ಸೋನಿಯಾ ಗಾಂಧಿಯವರ ತಾಯಿ ಪಾವೊಲಾ ಮೈನೋ ಅವರು ಆ. 27 ರಂದು ಇಟಲಿಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ನಿನ್ನೆ ನಡೆಯಿತು” ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News