×
Ad

ಮೈಸೂರು: ಅಪ್ರಾಪ್ತೆಯ ಅತ್ಯಾಚಾರ ಆರೋಪ; ಪ್ರಕರಣ ದಾಖಲು

Update: 2022-08-31 20:40 IST
ಸಾಂದರ್ಭಿಕ ಚಿತ್ರ

ಮೈಸೂರು: ಮೈಸೂರು(Mysuru) ನಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ನಡೆಸಿದ್ದಾರೆನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅತ್ಯಾಚಾರಕ್ಕೊಳಗಾದ ಬಾಲಕಿಯು ಅನಾರೋಗ್ಯಕ್ಕೆ ಒಳಗಾದ ಹಿನ್ನಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈ ಸಂಬಂಧ ಮೈಸೂರಿನ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News