×
Ad

ಉದ್ಯಾವರದಲ್ಲಿ ಸಾರ್ವಜನಿಕ ಗಣೇಶೋತ್ಸವ; ಸಂತ ಫ್ರಾನ್ಸಿಸ್ ಝೇವಿಯರ್ ಧರ್ಮಗುರು ಸೌಹಾರ್ದ ಭೇಟಿ

Update: 2022-08-31 21:44 IST

ಉಡುಪಿ: ಉದ್ಯಾವರದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮತ್ತು ಫ್ರೆಂಡ್ಸ್ ಗಾರ್ಡನ್ ಅರೂರುತೋಟ  ಸಂಪಿಗೆನಗರದ ಗಣೇಶೋತ್ಸವ ಕಾರ್ಯಕ್ರಮಕ್ಕೆ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಧರ್ಮಗುರುಗಳು ಮತ್ತು ಕ್ರೈಸ್ತರು ಭಾಗವಹಿಸಿ ಸೌಹಾರ್ದತೆ ಮೆರೆದರು.

ಇಪ್ಪತ್ತೈದು ವರ್ಷಕ್ಕೂ ಅಧಿಕ ಇತಿಹಾಸವಿರುವ ಸಾರ್ವಜನಿಕ ಗಣೇಶೋತ್ಸವ ಸಮಿತಿ ಉದ್ಯಾವರ ಮತ್ತು ಫ್ರೆಂಡ್ಸ್ ಗಾರ್ಡನ್ ಅರೂರುತೋಟದ ಸದಸ್ಯರು ಈ ಬಾರಿಯೂ ಅತ್ಯಂತ ವಿಜ್ರಂಭಣೆಯಿಂದ ಗೌರಿ ಗಣೇಶ ಹಬ್ಬವನ್ನು ಆಚರಿಸಿದ್ದರು.

ಕಾರ್ಯಕ್ರಮಕ್ಕೆ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ಅ. ವಂ. ಫಾ. ಸ್ಟ್ಯಾನಿ ಬಿ ಲೋಬೊ ಮತ್ತು ಸಹಾಯಕ ಧರ್ಮಗುರು ವಂ. ಲಿಯೋ ಪ್ರವೀಣ್ ಡಿಸೋಜ ಅವರು ಭಾಗವಹಿಸಿ ಶುಭ ಹಾರೈಸಿ, ಗೌರವ ಸ್ವೀಕರಿಸಿದರು.

ಈ ಸಂದರ್ಭ ಪಾಲನ ಮಂಡಳಿಯ ಉಪಾಧ್ಯಕ್ಷರಾದ ಮೆಲ್ವಿನ್ ನೊರೊನ್ಹಾ, ಕಾರ್ಯದರ್ಶಿ ಮೈಕಲ್ ಡಿಸೋಜ, 20 ಆಯೋಗಗಳ ಸಂಯೋಜಕರಾದ ಜೆರಾಲ್ಡ್ ಪಿರೇರಾ, ಸೌಹಾರ್ದ ಸಮಿತಿಯ ಅಧ್ಯಕ್ಷ ವಿಲ್ಫ್ರೆಡ್ ಡಿಸೋಜ, ರೊನಾಲ್ಡ್ ಡಿಸೋಜ, ರೋಯ್ಸ್ ಫೆರ್ನಾಂಡಿಸ್, ಜೋನ್ ಗೋಮ್ಸ್, ಅನಿಲ್ ಡಿಸೋಜ, ಸುನಿಲ್ ಡಿಸೋಜ, ಸ್ಟೀವನ್ ಕುಲಾಸೊ ಮತ್ತಿತರರು ಉಪಸ್ಥಿತರಿದ್ದರು.

ಫ್ರೆಂಡ್ಸ್ ಗಾರ್ಡನ್ ಅರೂರುತೋಟ ಇಲ್ಲಿಯ ಪ್ರಮುಖರಾದ ದಿನೇಶ್ ಜತ್ತನ್ನ, ಪ್ರದೀಪ್ ಸುವರ್ಣ, ಯೋಗೀಶ್ ಕೋಟ್ಯಾನ್, ಹರೀಶ್ ಕುಮಾರ್ ಸೌಂದರ್ಯ, ಗಣೇಶ್ ಕುಮಾರ್, ರಿಯಾಝ್ ಪಳ್ಳಿ, ಗಿರೀಶ್ ಕುಮಾರ್, ಉದ್ಯಾವರ ಯುವಕ ಮಂಡಲ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪ್ರಮುಖರಾದ ಚೇತನ್ ಕುಮಾರ್ ಪಿತ್ರೋಡಿ, ಪ್ರಸಾದ್, ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.

ಸಮಾಜ ಸೇವಕ ಮತ್ತು ಗ್ರಾಮ ಪಂಚಾಯತ್ ಸದಸ್ಯ ಜಿತೇಂದ್ರ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News