×
Ad

ಮುರುಘಾ ಶರಣರ ಪ್ರಕರಣ: ಮೌನಕ್ಕೆ ಶರಣಾಗುವ ಪ್ರಶ್ನೆಯೇ ಇಲ್ಲ ಎಂದ ಹೆಚ್.ಡಿ. ಕುಮಾರಸ್ವಾಮಿ

Update: 2022-08-31 23:23 IST
ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಳೆ ನಿಂತ ಮೇಲೆ ಪ್ರಾರಂಭಿಸಲಾಗುವುದು. ಶೀಘ್ರದಲ್ಲೇ ಕಾರ್ಯಕ್ರಮದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ಹೇಳಿದ್ದಾರೆ.

ಜೆಪಿ ನಗರದ ತಮ್ಮ ನಿವಾಸಲ್ಲಿ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ಹಾಗೂ ಮೊಮ್ಮಗನ ಜೊತೆ ಗಣೇಶನ ಪೂಜೆ ನೆರವೇರಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಳೆ ನಿಂತ ಮೇಲೆ ಸರಿಯಾದ ಮೂಹೂರ್ತ ನಿಗದಿ ಮಾಡಿ ಪಂಚರತ್ನ ಕಾರ್ಯಕ್ರಮ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.

ಮುರಘಾ ಶಿವಮೂರ್ತಿ ಶರಣರ(Shivamurthy Murugha Sharanaru) ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್ಡಿಕೆ, ಸರಕಾರ ಎಚ್ಚರಿಕೆಯಿಂದ ಕ್ರಮ ತೆಗೆದುಕೊಳ್ಳಬೇಕು. ನಾನು ಮತ್ತು ಸಿದ್ದರಾಮಯ್ಯ ಮೌನಕ್ಕೆ ಶರಣನಾಗಿದ್ದೇವೆ ಎಂದು ವಿಧಾನ ಪರಿಷತ್  ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಇಂಥಹ ಪ್ರಕರಣಕ್ಕೆ ನಾನು ಮೌನಕ್ಕೆ ಶರಣಾಗುವ ಪ್ರಶ್ನೆಯೇ ಇಲ್ಲ. ಇದು ಸರಕಾರದ ಜವಾಬ್ದಾರಿ, ಅವರ ವಿರುದ್ಧ ಇರುವ ಆರೋಪಗಳ ಬಗ್ಗೆ ಮನಗಂಡು ಸಂಬಂಧಪಟ್ಟ ಇಲಾಖೆಗಳು ತೀರ್ಮಾನ ಮಾಡಬೇಕು, ಅದು ಅವರ ಕರ್ತವ್ಯ. ಇದನ್ನು ರಾಜಕೀಯವಾಗಿ ಯಾರು ಬಳಕೆ ಮಾಡಿಕೊಳ್ಳಬಾರದು ಎಂದರು.

ಪ್ರಕರಣಗಳಿಂದ ಧಾರ್ಮಿಕ ಕ್ಷೇತ್ರದ ಮೇಲೆ ಇರುವ ನಂಬಿಕೆಗೆ ಅಪಚಾರ ಆಗಬಾರದು. ಕಾನೂನು ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗೊಂದಲ ಆಗದಂತೆ ಸರಕಾರ ತೀರ್ಮಾನ ಮಾಡಬೇಕು. ಇಲ್ಲಿ ಸಮುದಾಯದ ಪ್ರಶ್ನೆ ಅಲ್ಲ, ದೇಶದಲ್ಲಿ ನಾವು ಕಾನೂನು ರಚನೆ ಮಾಡಕೊಂಡಿದ್ದೇವೆ. ಯಾರು ಯಾವ ಸ್ಥಾನದಲ್ಲಿ ಇದ್ದಾರೆ, ಅವರು ಇಲ್ಲಿ ಉತ್ತರ ಕೊಡಬೇಕು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News