×
Ad

ಡಿಕೆ ಶಿವಕುಮಾರ್ ನಿವಾಸಕ್ಕೆ ಮಧ್ಯಪ್ರದೇಶ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಭೇಟಿ

Update: 2022-09-01 08:16 IST

ಬೆಂಗಳೂರು, ಸೆ. 1: ಸದಾಶಿವನಗರದ ತಮ್ಮ ನಿವಾಸಕ್ಕೆ ಬುಧವಾರ ರಾತ್ರಿ ಭೇಟಿ ನೀಡಿದ ಭಾರತ್ ಜೋಡೋ ಯಾತ್ರೆಯ ರಾಷ್ಟ್ರೀಯ ಸಮಿತಿ ಅಧ್ಯಕ್ಷ, ಮಧ್ಯಪ್ರದೇಶದ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೂಗುಚ್ಛ ನೀಡಿ ಬರಮಾಡಿಕೊಂಡರು.

ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಉಸ್ತುವಾರಿ ವಹಿಸಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್, ಸಂಸದ ಡಿಕೆ ಸುರೇಶ್, ರಾಜ್ಯಸಭೆ ಸದಸ್ಯ ಜೈರಾಮ್ ರಮೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News