ಪೊಕ್ಸೊ ಪ್ರಕರಣ: ಮುರುಘಾ ಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Update: 2022-09-01 07:35 GMT

ಚಿತ್ರದುರ್ಗ, ಸೆ.1: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಪೊಕ್ಸೊ (POCSO) ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ನಾಳೆ(ಸೆ.2)ಗೆ ಮುಂದೂಡಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ವೈದ್ಯರ ನಿರ್ಲಕ್ಷ್ಯ, ತಾಯಿಯ ಮಡಿಲಲ್ಲೇ ಪ್ರಾಣಬಿಟ್ಟ ಬಾಲಕ

ನಿರೀಕ್ಷಣಾ ಜಾಮೀನು ಕೋರಿ ಮುರುಘಾ ಶರಣರು ಆ.29ರಂದು ಕೋರ್ಟ್‌ ಮೊರೆ ಹೋಗಿದ್ದರು. ಇದರ ವಿಚಾರಣೆಯನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರು ಕೈಗೆತ್ತಿಕೊಂಡಿದ್ದು, ತಕರಾರು ಸಲ್ಲಿಕೆಗೆ ಅವಕಾಶ ಕಲ್ಪಿಸಿ ವಿಚಾರಣೆಯನ್ನು ಸೆ.1ಕ್ಕೆ ಮುಂದೂಡಿದ್ದರು. ಇದೀಗ ಅರ್ಜಿಯ ವಿಚಾರಣೆಯನ್ನು ಸೆ.2ಕ್ಕೆ ನ್ಯಾಯಾಲಯ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News