×
Ad

ಮಂಗಳೂರು | ನಾಳೆ ಪ್ರಧಾನಿಯಿಂದ 3,800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

Update: 2022-09-01 16:20 IST

ಮಂಗಳೂರು, ಸೆ.1: ಮಂಗಳೂರಿಗೆ ಸೆ.2ರಂದು ಭೇಟಿ ನೀಡಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1:30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ರೂ.3,800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ ಕಂಟೈನರ್ ಗಳು ಹಾಗೂ ಇತರ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ (ರೂ. 281 ಕೋಟಿ), ಬಿಎಸ್ VI ಉನ್ನತೀಕರಣ ಯೋಜನೆ (ರೂ. 1829 ಕೋಟಿ), ಸಮುದ್ರ ನೀರಿನ ಸಂಸ್ಕರಣಾ ಘಟಕ (ರೂ. 677 ಕೋಟಿ) ಗಳು ಸೇರಿವೆ.

ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ, ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ  (ಅಂದಾಜು ವೆಚ್ಚ ರೂ.500 ಕೋಟಿ), ಶೇಖರಣಾಗಾರ ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ (ರೂ. 100 ಕೋಟಿ), ಬೆಟುಮಿನ್ ಶೇಖರಣಾ  ಘಟಕಗಳ ನಿರ್ಮಾಣ (ರೂ. 100 ಕೋಟಿ) ಹಾಗೂ  ಬೆಟುಮಿನ್, ಖಾದ್ಯ ತೈಲ ಶೇಖರಣಾ ಘಟಕ ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ. 100 ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಜೊತೆಗೆ, ಕುಳಾಯಿ ಯಲ್ಲಿ  ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವ  ಶ್ರೀಪಾದ್ ಯೆಸ್ಸೋ ನಾಯಕ್  ಹಾಗೂ ಶಂತನು ಠಾಕೂರ್  ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News