ಮೈಸೂರು: ಹೋಟೆಲ್‍ನಲ್ಲಿ ಯುವತಿ ಅನುಮಾನಾಸ್ಪದ ಸಾವು

Update: 2022-09-01 16:53 GMT
ಸಾಂದರ್ಭಿಕ ಚಿತ್ರ

ಮೈಸೂರು,ಸೆ.1: ಮೈಸೂರಿನ (Mysuru) ಪ್ರತಿಷ್ಠಿತ ಖಾಸಗಿ ಹೋಟೆಲ್ ನಲ್ಲಿ ಯುವತಿ ಓರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಅಪೂರ್ವ ಶೆಟ್ಟಿ ಅನುಮಾನಾಸ್ಪದವಾಗಿ ಮೃತಪಟ್ಟ ಯುವತಿ ಎಂದು ತಿಳಿದು ಬಂದಿದೆ.

ಕಳೆದ ಎರಡು ದಿನಗಳ ಹಿಂದೆ ಯುವಕನೋರ್ವನ ಜೊತೆ ಬಂದಿದ್ದ ಅಪೂರ್ವ ಶೆಟ್ಟಿ ಕೊಠಡಿ ಪಡೆದು ತಂಗಿದ್ದರು. ಇಂದು  ಕೊಠಡಿಯಲ್ಲಿ ಯುವತಿ ಮೃತದೇಹ ಪತ್ತೆಯಾಗಿದೆ. ಯುವತಿ ಬಾಯಲ್ಲಿ ನೊರೆ ಬರುತ್ತಿದ್ದು,  ಯುವಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಯುವತಿ ಸಾವು ಸಹಜವೋ ಕೊಲೆಯೋ ಎಂಬುದು ತನಿಖೆ ನಂತರ ತಿಳಿದು ಬರಲಿದೆ.

ದೇವರಾಜ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತಪಟ್ಟ ಯುವತಿ ಬಗ್ಗೆ ಪೊಲೀಸರು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News