×
Ad

ಸೆ.4ರಂದು ಬಿ.ಜಿ.ಮೋಹನ್ ದಾಸ್ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ

Update: 2022-09-01 22:08 IST
ಪತ್ರಕರ್ತ ಸಂಶುದ್ದೀನ್ ಎಣ್ಮೂರು

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜದಲ್ಲಿರುವ ಕನ್ನಡ ಭವನದಲ್ಲಿ ಸೆ.4ರಂದು ಬೆಳಗ್ಗೆ 9:30ಕ್ಕೆ ಕವಿಗೋಷ್ಠಿ ಮತ್ತು 11ರಿಂದ ಬಿ.ಜಿ.ಮೋಹನದಾಸ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ತುಂಬೆ ಕಡೆಗೋಳಿಯ ನಿರತ ಸಾಹಿತ್ಯ ಸಂಪದ ಪ್ರಕಟಣೆ ತಿಳಿಸಿದೆ. 

ಗಲ್ಫ್ ಕನ್ನಡಿಗ ಡಾಟ್ ಕಾಮ್ ಸಹಯೋಗದಲ್ಲಿ ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ವರದಿಗೆ ನೀಡಲಾಗುವ ಬಿ.ಜಿ.ಮೋಹನ್ ದಾಸ್ ಪ್ರಶಸ್ತಿಗೆ ವಾರ್ತಾಭಾರತಿ ಉಪ ಸಂಪಾದಕ, ಪತ್ರಕರ್ತ ಸಂಶುದ್ದೀನ್ ಎಣ್ಮೂರು ಆಯ್ಕೆಯಾಗಿದ್ದಾರೆ. 

ವಿದೇಶದಲ್ಲಿ ಮೊದಲ ಕನ್ನಡ ವೆಬ್ ಸೈಟ್ ಗಲ್ಫ್ ಕನ್ನಡಿಗ. ಕಾಮ್ ನ್ನು ಎರಡು ದಶಕಗಳ ಹಿಂದೆ ಆರಂಭಿಸಿದ್ದ ದಿವಂಗತ ಬಿ.ಜಿ.ಮೋಹನ್ ದಾಸ್ ಅವರ ಸ್ಮರಣಾರ್ಥ ಡಿಜಿಟಲ್ ಮಾಧ್ಯಮದಲ್ಲಿ ಅತ್ಯುತ್ತಮ ವರದಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. 

ಬೆಳಗ್ಗೆ ನಡೆಯುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಜಯರಾಮ ಪಡ್ರೆ ವಹಿಸುವರು. ಬಳಿಕ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಉಡುಪಿ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಜಂಟಿ ಕಾರ್ಯದರ್ಶಿ ಬಿ.ಜಿ.ಲಕ್ಷ್ಮೀಕಾಂತ್, ವಕೀಲ ಸುಕೇಶ್ ಕುಮಾರ್ ಶೆಟ್ಟಿ, ಶಿಕ್ಷಕಿ ಸುಧಾ ನಾಗೇಶ್ ಭಾಗವಹಿಸಲಿದ್ದು, ನಿರತ ಅಧ್ಯಕ್ಷ ಬ್ರಿಜೇಶ್ ಅಂಚನ್ ಅಧ್ಯಕ್ಷತೆ ವಹಿಸುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News