ಬೆಂಗಳೂರಿನಲ್ಲಿ ಮಳೆ ನೀರಿನ ಸಮಸ್ಯೆಗೆ ಹಿಂದಿನ ಸರಕಾರಗಳ ನಿರ್ಲಕ್ಷ್ಯವೇ ಕಾರಣ: ಸಿಎಂ ಬೊಮ್ಮಾಯಿ

Update: 2022-09-01 18:46 GMT

ಬೆಂಗಳೂರು, ಸೆ.1: ಹಿಂದಿನ ಸರಕಾರಗಳ ನಿರ್ಲಕ್ಷ್ಯತೆ, ಭ್ರಷ್ಟಾಚಾರ ಮತ್ತು ಬೇಜವಾಬ್ದಾರಿಯಿಂದಾಗಿ ಬೆಂಗಳೂರು ನಗರದಲ್ಲಿ ಮಳೆ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ, ರಾಜಕಾಲುವೆ ಒತ್ತುವರಿ ತೆರವಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಗುರುವಾರ ಮಳೆಹಾನಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬಿಬಿಎಂಪಿ, ಬಿಡಿಎ, ಜಲಮಂಡಳಿ ಸೇರಿದಂತೆ ಎಲ್ಲ ಸಂಸ್ಥೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.

30 ಅಡಿ ಕಾಲುವೆಯನ್ನು 4 ಅಡಿ ಅಗಲಕ್ಕೆ ಒತ್ತುವರಿಯಾಗಿದೆ. ಕೂಡಲೇ ತೆರವುಗೊಳಿಸಬೇಕು. ರಾಜಕಾಲುವೆ ಅಭಿವೃದ್ಧಿಗೆ 800 ಕೋಟಿ ರೂ. ಹಣ ಬಿಡುಗಡೆ ಯಾದರೂ ಅದು ಸರಿಯಾಗಿ ಬಳಕೆ ಆಗಿಲ್ಲ ಎಂದು ದೂರಿದರು. ಅಲ್ಲದೆ, ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ, ರಾಜಕಾಲುವೆಗೆ ಬಿಡುವ ಸಂಬಂಧ ಕ್ರಿಯಾ ಯೋಜನೆಯನ್ನು ರೂಪಿಸಬೇಕು. ಇದಕ್ಕೆ ಎಲ್ಲ ರೀತಿಯ ಹಣಕಾಸಿನ ಸಹಕಾರವನ್ನೂ ನೀಡಲಾಗುವುದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಈ ಸಂದರ್ಭದಲ್ಲಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ಬಿ.ಎ. ಬಸವರಾಜ, ಶಾಸಕ ಅರವಿಂದ ಲಿಂಬಾವಳಿ ಹಾಗೂ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News