ಉಳ್ಳಾಲ: ಕಾರ್ಮಿಕನಿಗೆ ತಂಡದಿಂದ ಹಲ್ಲೆ ಆರೋಪ; ಪ್ರಕರಣ ದಾಖಲು
Update: 2022-09-01 23:19 IST
ಉಳ್ಳಾಲ: ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕಾರ್ಮಿಕರೊಬ್ಬರಿಗೆ ತಂಡವೊಂದು ಹಲ್ಲೆ ನಡೆಸಿದ್ದರೆನ್ನಲಾದ ಘಟನೆ ಕೋಟೆಪುರದಲ್ಲಿ ಬುಧವಾರ ರಾತ್ರಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಕೋಟೆಪುರ ನಿವಾಸಿ ಮುಹಮ್ಮದ್ ಇರ್ಷಾದ್ (31)ಎಂದು ತಿಳಿದು ಬಂದಿದೆ.
ಇರ್ಷಾದ್ ಅವರು ಕೋಟೆಪುರ ಫಿಶ್ ಮಿಲ್ ಫ್ಯಾಕ್ಟರಿಯಲ್ಲಿ ಲೋಡಿಂಗ್ ಕೆಲಸ ಮಾಡುತ್ತಿದ್ದ ಸಂದರ್ಭ ಕಬೀರ್ ಹಾಗೂ ರಾಝಿಕ್ ಎಂಬವರು ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಇರ್ಷಾದ್ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಾಗಿದೆ.