ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಗೆ ಕೋವಿಡ್ ಪಾಸಿಟಿವ್
ಮಂಗಳೂರು, ಸೆ.2: ಮಾಜಿ ಸಚಿವ, ವಿಪಕ್ಷ ಉಪನಾಯಕ ಯು.ಟಿ.ಖಾದರ್ ಕೋವಿಡ್ (Covid-19) ಸೋಂಕಿಗೆ ಪಾಸಿಟಿವ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರ ಮೂರು ದಿನಗಳ ಎಲ್ಲಾ ನಿಗದಿತ ಕಾರ್ಯಕ್ರಮಗಳು ರದ್ದುಗೊಳಿಸಲಾಗಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ಆಡಿದ್ದ ಮಾತುಗಳನ್ನು ಕನ್ನಡಿಗರು ಇನ್ನೂ ಮರೆತಿಲ್ಲ: ಕಾಂಗ್ರೆಸ್
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸಕರುಗಳಿಗೆ RTPCR ರಿಪೋರ್ಟ್ ಕಡ್ಡಾಯಪಡಿಸಲಾಗಿತ್ತು. ಅದರಂತೆ ಗುರುವಾರ ರಾತ್ರಿ ಶಾಸಕ ಯು.ಟಿ.ಖಾದರ್ RTPCR ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಅವರು ಕೋವಿಡ್ ಗೆ ಪಾಸಿಟಿವ್ ಆಗಿರುದು ದೃಢಪಟ್ಟಿದೆ. ರೋಗದ ಯಾವುದೇ ಗುಣಲಕ್ಷಣ ಇಲ್ಲದೇ ಇದ್ದರೂ ವೈದ್ಯರ ಸಲಹೆಯಂತೆ 3 ದಿನಗಳ ಕ್ವಾರಂಟೈನ್ ಆಗಲಿರುವುದಾಗಿ ಖಾದರ್ ತಿಳಿಸಿದ್ದಾರೆ.
ಕ್ವಾರಂಟೈನ್ ಕಾರಣ ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ. ಅಲ್ಲದೆ ಈ ಮೂರು ದಿನಗಳಲ್ಲಿ ನಿಗದಿಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಅಗತ್ಯಬಿದ್ದಲ್ಲಿ ಸಾರ್ವಜನಿಕರು ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಶಾಸಕರ ಪ್ರಕಟನೆ ತಿಳಿಸಿದೆ.